ನಗರದಲ್ಲಿ ಜುಲೈ 7 ರಂದು ನಾಡಪ್ರಭು ಕೆಂಪೇಗೌಡ ಜಯಂತಿ

ಕೆಂಪೇಗೌಡ ಜಯಂತಿ ಆಚರಣೆ ಸಮಿತಿ ವತಿಯಿಂದ ಜುಲೈ 7ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಅದ್ಧೂರಿಯಾಗಿ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ ಎಂದು ತಾಲೂಕು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸಮಿತಿ ಅಧ್ಯಕ್ಷ ಟಿ.ವಿ ಲಕ್ಷ್ಮಿನಾರಾಯಣ ಅವರು ತಿಳಿಸಿದರು.

ನಗರದ ಪಿಎಲ್‌ಡಿ ಬ್ಯಾಂಕ್‌ನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜು.7ರಂದು ಬೆಳಿಗ್ಗೆ 9ಕ್ಕೆ ಬೆಳ್ಳಿ-ರಥದಲ್ಲಿ ಕೆಂಪೇಗೌಡರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ನಗರದ ನೆಲದಾಂಜನೇಯಸ್ವಾಮಿ ದೇವಾಲಯದಿಂದ ಆರಂಭವಾಗುವ ಮೆರವಣಿಗೆ, ಸೌಂದರ್ಯ ಮಹಲ್ ಚಿತ್ರಮಂದಿರ, ತಾಲ್ಲೂಕು ಕಚೇರಿ ವೃತ್ತ ಮೂಲಕ ಜಿ.ರಾಮೇಗೌಡ ವೃತ್ತಕ್ಕೆ ತೆರಳಿ, ನಂತರ ಒಕ್ಕಲಿಗರ ಸಮುದಾಯ ಭವನಕ್ಕೆ ಆಗಮಿಸಲಿದೆ. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ 2023-24ನೇ ಸಾಲಿನಲ್ಲಿ ಎಸ್. ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಮಾತನಾಡಿ, ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಬೆಂಗಳೂರಿನ ವಿವಿಧ ಪೇಟೆಗಳನ್ನು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ ದೂರದೃಷ್ಟಿಯು ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ. ಬೆಂಗಳೂರು ಕಟ್ಟಿದ ಕೆಂಪೇಗೌಡ ವಿಶಾಲ ಬಯಲು ಪ್ರದೇಶವನ್ನು ಆಯ್ಕೆ ಮಾಡಿಕೊಂಡು ಕೃಷಿಗೆ ಪೂರಕವಾದ ಕೆರೆ- ಕಟ್ಟೆ ನಿರ್ಮಾಣ ಮಾಡಿದ್ದರು. ಇಂತಹ ಮಹಾನ್ ಪುರುಷರ ಜಯಂತಿಗೆ ಯಾವುದೇ ಪಕ್ಷ ಬೇಧವಿಲ್ಲದೆ ಎಲ್ಲರೂ ಒಗ್ಗೂಡಿ ಕೆಂಪೇಗೌಡ ಜಯಂತಿಯನ್ನು ಆಚರಿಸಬೇಕಿದೆ ಎಂದು ಹೇಳಿದರು.

ತಾಲೂಕಿನಲ್ಲಿ ರಾಜ್ಯ ಒಕ್ಕಲಿಗರ ಸಂಘದಲ್ಲಿ ಸುಮಾರು 25 ಸಾವಿರ ಮಂದಿ ಸದಸ್ಯತ್ವ ಹೊಂದಿದ್ದು, ಎಲ್ಲರೂ  ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದರು ಮನವಿ ಮಾಡಿದರು.

ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಮುಖಂಡರಾದ ಲಕ್ಷ್ಮಿಪತಿ, ನರಸಿಂಹಣ್ಣ, ಅಶ್ವಥ್ ನಾರಾಯಣ ಗೌಡ, ವಿಶ್ವಾಸ್ ಹನುಮಂತೇಗೌಡ ಸೇರಿದಂತೆ ಇತರರು ಉಪಸ್ಥಿರಿದ್ದಜುಲೈ

Leave a Reply

Your email address will not be published. Required fields are marked *