ಕೆಂಪೇಗೌಡ ಜಯಂತಿ ಆಚರಣೆ ಸಮಿತಿ ವತಿಯಿಂದ ಜುಲೈ 7ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಅದ್ಧೂರಿಯಾಗಿ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ ಎಂದು ತಾಲೂಕು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸಮಿತಿ ಅಧ್ಯಕ್ಷ ಟಿ.ವಿ ಲಕ್ಷ್ಮಿನಾರಾಯಣ ಅವರು ತಿಳಿಸಿದರು.
ನಗರದ ಪಿಎಲ್‌ಡಿ ಬ್ಯಾಂಕ್‌ನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜು.7ರಂದು ಬೆಳಿಗ್ಗೆ 9ಕ್ಕೆ ಬೆಳ್ಳಿ-ರಥದಲ್ಲಿ ಕೆಂಪೇಗೌಡರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ನಗರದ ನೆಲದಾಂಜನೇಯಸ್ವಾಮಿ ದೇವಾಲಯದಿಂದ ಆರಂಭವಾಗುವ ಮೆರವಣಿಗೆ, ಸೌಂದರ್ಯ ಮಹಲ್ ಚಿತ್ರಮಂದಿರ, ತಾಲ್ಲೂಕು ಕಚೇರಿ ವೃತ್ತ ಮೂಲಕ ಜಿ.ರಾಮೇಗೌಡ ವೃತ್ತಕ್ಕೆ ತೆರಳಿ, ನಂತರ ಒಕ್ಕಲಿಗರ ಸಮುದಾಯ ಭವನಕ್ಕೆ ಆಗಮಿಸಲಿದೆ. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ 2023-24ನೇ ಸಾಲಿನಲ್ಲಿ ಎಸ್. ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಮಾತನಾಡಿ, ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಬೆಂಗಳೂರಿನ ವಿವಿಧ ಪೇಟೆಗಳನ್ನು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ ದೂರದೃಷ್ಟಿಯು ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ. ಬೆಂಗಳೂರು ಕಟ್ಟಿದ ಕೆಂಪೇಗೌಡ ವಿಶಾಲ ಬಯಲು ಪ್ರದೇಶವನ್ನು ಆಯ್ಕೆ ಮಾಡಿಕೊಂಡು ಕೃಷಿಗೆ ಪೂರಕವಾದ ಕೆರೆ- ಕಟ್ಟೆ ನಿರ್ಮಾಣ ಮಾಡಿದ್ದರು. ಇಂತಹ ಮಹಾನ್ ಪುರುಷರ ಜಯಂತಿಗೆ ಯಾವುದೇ ಪಕ್ಷ ಬೇಧವಿಲ್ಲದೆ ಎಲ್ಲರೂ ಒಗ್ಗೂಡಿ ಕೆಂಪೇಗೌಡ ಜಯಂತಿಯನ್ನು ಆಚರಿಸಬೇಕಿದೆ ಎಂದು ಹೇಳಿದರು.
ತಾಲೂಕಿನಲ್ಲಿ ರಾಜ್ಯ ಒಕ್ಕಲಿಗರ ಸಂಘದಲ್ಲಿ ಸುಮಾರು 25 ಸಾವಿರ ಮಂದಿ ಸದಸ್ಯತ್ವ ಹೊಂದಿದ್ದು, ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದರು ಮನವಿ ಮಾಡಿದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಮುಖಂಡರಾದ ಲಕ್ಷ್ಮಿಪತಿ, ನರಸಿಂಹಣ್ಣ, ಅಶ್ವಥ್ ನಾರಾಯಣ ಗೌಡ, ವಿಶ್ವಾಸ್ ಹನುಮಂತೇಗೌಡ ಸೇರಿದಂತೆ ಇತರರು ಉಪಸ್ಥಿರಿದ್ದಜುಲೈ
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…