ಪ್ರತಿಯೊಬ್ಬರಿಗೂ ಸಕಾಲದಲ್ಲಿ ನರ್ಸರಿ ಗಿಡಗಳು ದೊರಕಬೇಕೆನ್ನುವ ಉದ್ದೇಶದಿಂದ ಸರ್ಕಾರ ನರ್ಸರಿಯನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಸಾಹಾಯ ಸಂಘಗಳಿಗೆ ಉತ್ತೇಜನ ನೀಡುತ್ತಿದೆ ಎಂದು ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ಮಂಗಳವಾರ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.
ಈ ವೇಳೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ಸಹಾಯದೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ ತರಬೇತಿ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ಸರಕಾರ ಬೇಡಿಕೆಗೆ ಅನುಗುಣವಾಗಿ ನರ್ಸರಿ ಸಸಿಗಳನ್ನು ಪ್ರತಿಮನೆಗೂ ತಲುಪಿಸಲು ಸಾಧ್ಯವಾಗುತಿಲ್ಲ ಆದ್ದರಿಂದ ಸ್ವಸಹಾಯ ಸಂಘಗಳ ಮೂಲಕ ತರಬೇತಿ ನೀಡಿ ನರ್ಸರಿಗಳನ್ನು ಉತ್ತೇಜಿಸಿ ಎಲ್ಲಿರಿಗೂ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಾಂತ 12 ಸ್ವಸಹಾಯ ಸಂಘಗಳನ್ನು ಗುರುತಿಸಿದ್ದು ನರ್ಸರಿ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದರು.
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…