ಕೋರ್ಟ್, ತಾಲ್ಲೂಕು ಕಚೇರಿಗೆ ಬರುವ ಸಾರ್ವಜನಿಕರನ್ನೇ ಟಾರ್ಗೆಟ್ ಮಾಡಿರುವ ಬೈಕ್ ಕಳ್ಳರು ಸದ್ದಿಲ್ಲದೆ ದಿನಕ್ಕೊಂದು ಬೈಕ್ ಕಳ್ಳತನ ಮಾಡುತ್ತಿದ್ದಾರೆ. ಜುಲೈ 27ರಂದು ನಗರದ ಕೋರ್ಟ್ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಆಗಿದೆ. ಕೋರ್ಟ್ ಕೆಲಸದ ಮೇರೆಗೆ ವಕೀಲರನ್ನು ಕಾಣಲು ಗೋಪಾಲ ಎಂಬುವರು ಆಕ್ಟೀವ್ ಹೋಂಡಾ ಬೈಕ್ ನಲ್ಲಿ ಕೋರ್ಟ್ ಬಳಿ ಬಂದಿದ್ದು, ಮೋಟಾರ್ ಬೈಕ್ ನ್ನು ಬೆಳಗ್ಗೆ 11 ಗಂಟೆ ಸಮಯದಲ್ಲಿ ಕೋರ್ಟ್ ಮುಂಭಾಗದಲ್ಲಿ ನಿಲ್ಲಿಸಿ ಕೋರ್ಟ್ ಒಳಗಡೆ ಹೋಗಿದ್ದಾರೆ. ಕೆಲಸ ಮುಗಿಸಿ ವಾಪಸ್ ಬರುವಷ್ಟರಲ್ಲಿ ಅಂದರೆ 12.50 ಗಂಟೆಗೆ ಬಂದು ನೋಡಿದಾಗ ದ್ವಿಚಕ್ರ ವಾಹನ ನಾಪತ್ತೆ ಆಗಿದೆ.
ಅದೇ ರೀತಿ ಮರುದಿನ ಜುಲೈ 28 ರಂದು ತಾಲೂಕು ಕಚೇರಿ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಹೀರೊ ಹೋಂಡಾ ಸ್ಪ್ಲೆಂಡರ್ ಪ್ಲಸ್ ಬೈಕ್ ನ್ನು ನಕಲಿ ಕೀ ಬಳಸಿ ಕದ್ದೊಯ್ದಿದ್ದಾರೆ. ಮಂಜುನಾಥ.ಬಿ ಎಂಬುವರು ಸರ್ವೇಯರ್ ಆಗಿ ಕೆಲಸ ಮಾಡುತ್ತಾರೆ. ಎಂದಿನಂತೆ ಬೆಳಗ್ಗೆ 10 ಗಂಟೆಯಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಪಾರ್ಕ್ ಮಾಡಿ ಕೆಲಸಕ್ಕೆ ಹೋಗಿದ್ದಾರೆ. ನಂತರ ಸಂಜೆ 4:45ಕ್ಕೆ ಕೆಲಸ ಮುಗಿದ ಬಳಿ ಬೆಳಗ್ಗೆ ನಿಲ್ಲಿಸಿದ್ದ ಜಾಗದಲ್ಲಿ ಬೈಕ್ ನಾಪತ್ತೆ ಆಗಿದೆ.
ಬೈಕ್ ಕಳವು ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿರುವುದರಿಂದ ಬೈಕ್ ಸವಾರರು ಬೆಚ್ಚಿಬಿದ್ದಿದ್ದಾರೆ.
ಜನ ಗಿಜಿಗುಡುವ, ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಕ್ ಮಾಡಿರೋ ಬೈಕ್ ಗಳನ್ನು ಹಾಡಹಗಲೇ ಕಳವು ಮಾಡುತ್ತಿರುವ ಖದೀಮರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕಿದೆ. ನಗರದ ಪ್ರಮುಖ ಕಚೇರಿ, ವೃತ್ತ, ರಸ್ತೆ, ಸೇರಿದಂತೆ ವಿವಿಧೆಡೆ ಸಿಸಿಟಿವಿ ಅಳವಡಿಸಿ ಇಂತಹ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ, ಕಳ್ಳರ ಹಾವಳಿಯನ್ನು ತಡೆಗಟ್ಟಬೇಕು ಎಂದು ಸಂಬಂಧಿಸಿದ ಇಲಾಖೆಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…