ಅಪರಾಧ ಪ್ರಕರಣಗಳ ನಿಯಂತ್ರಣ, ಕಟ್ಟುನಿಟ್ಟಿನ ಸಂಚಾರಿ ನಿಯಮಗಳ ಜಾರಿಗೆ ಟೊಂಕ ಕಟ್ಟಿರುವ ಪೊಲೀಸರು ನಗರದ ವಿವಿಧೆಡೆ ನಿತ್ಯ ಫೂಟ್ ಪ್ಯಾಟ್ರೋಲಿಂಗ್(ಪಥ ಸಂಚಲನ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಬುಧವಾರ ರಾತ್ರಿ ನಗರ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿಯಾಗಿ ಡಿವೈಎಸ್ಪಿ ಪಿ.ರವಿ ಅವರ ನೇತೃತ್ವದಲ್ಲಿ ಫೂಟ್ ಪ್ಯಾಟ್ರೋಲಿಂಗ್ ನಡೆಸಿದರು.
ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ಪಥ ಸಂಚಲನವು ಬಸ್ ನಿಲ್ದಾಣ, ವಿವೇಕಾನಂದ ರಸ್ತೆ, ಚೌಕದ ಮೂಲಕ ಮುಗವಾಳಪ್ಪ ವೃತ್ತ, ಶಾಂತಿನಗರ, ಜಾಲಪ್ಪ ಕಾಲೇಜುವರೆಗೂ ಸಾಗಿತು.
ಬಸ್ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ಬಸ್,ಆಟೊ, ಇತರೆ ವಾಹನ ಚಾಲಕರಿಗೆ ಸಂಚಾರಿ ನಿಯಮ ಪಾಲನೆ ಮಾಡುವಂತೆ ತಿಳಿಹೇಳಿದರು. ಬೀದಿ ಬದಿ ವ್ಯಾಪಾರಿಗಳು ರಸ್ತೆಗೆ ಬಂದು ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡಿದರು. ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೊ ಚಾಲಕರು, ದಾರಿಯಲ್ಲಿ ಬೇಕಾಬಿಟ್ಟಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಚಾಲಕರಿಗೆ ವಾರ್ನಿಂಗ್ ನೀಡಿದರು.
ಜಾಲಪ್ಪ ಕಾಲೇಜು ಬಳಿ ಪೊಲೀಸರು ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ಕೈಗೊಂಡರು. 100ಮೀ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಮಾರಾಟ ಮಾಡುತ್ತಿದ್ದ ಅಂಗಡಿಗಳಿಂದ ತಂಬಾಕು ವಸ್ತುಗಳನ್ನು ವಶಪಡಿಸಿಕೊಂಡರು. ಜೊತೆಗೆ ಇನ್ನು ಮುಂದೆ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ದೂರಿನ ಸುರಿಮಳೆಗೈದರು.
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…