ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಹಾಗೂ ಶಿಕ್ಷಣ ಇಲಾಖೆ ಇವರ ಜಂಟಿಯಾಗಿ ದೊಡ್ಡಬಳ್ಳಾಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಶುಕ್ರವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು.
ಈ ತಪಾಸಣೆ ವೇಳೆಯಲ್ಲಿ ಮೂವರು ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಬಳಿಕ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಿದರು.
ಅಲ್ಲದೇ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.
ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದರು.
ಅಲ್ಲದೇ ದೊಡ್ಡಬಳ್ಳಾಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಮಾಲೀಕರಿಗೆ ಕರಪತ್ರಗಳನ್ನು ಹಂಚಿ ಮಾಲೀಕರಿಗೆ ಹಾಗೂ ಸ್ಥಳಗಳಲ್ಲಿ ಇದ್ದ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಲಾಯಿತು.
ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್. ಎಸ್, ಕಾರ್ಮಿಕ ನಿರೀಕ್ಷಕರಾದ ದಯಾನಂದ ಸಾಗರ್, ಶಿಕ್ಷಣ ಇಲಾಖೆಯ ಇಸಿಒ ಭೀಮರಾಜು ಪೋಲಿಸ್ ಸಿಬ್ಬಂದಿ ಚಿತ್ರಲಿಂಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಪದ್ಮಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನರಸಿಂಹ ರಾಜು, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಶ್ರೀನಿವಾಸ ಮತ್ತು ಸೌಮ್ಯ ಹಾಜರಿದ್ದರು.
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…
DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…