ನಗರದಲ್ಲಿ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಅದ್ಧೂರಿ ಕರಗ ಮಹೋತ್ಸವ: ಕರಗ ಮಹೋತ್ಸವ ವೀಕ್ಷಿಸಿ ಧನ್ಯತೆ ಮೆರೆದ ಭಕ್ತಾಧಿಗಳು

ನಗರದ ಐತಿಹಾಸಿಕ ಸುಪ್ರಸಿದ್ಧ ಶ್ರೀ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಕರಗ ಮಹೋತ್ಸವವನ್ನ ಭಕ್ತಿಭಾವದಿಂದ ನಡೆಸಲಾಯಿತು.

ಶುಕ್ರವಾರ ಕರಗ ಮಹೋತ್ಸವ ಹಿನ್ನೆಲೆ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಬೆಳಿಗ್ಗೆಯಿಂದಲೇ ಭಕ್ತರು ದೇವಿಗೆ ವಿಶೇಷ ಪೂಜೆ, ಕೈಂಕರ್ಯದಲ್ಲಿ ತೊಡಗಿದ್ದರು. ದೇವಿಯ ದೇವಾಲಯದಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ, ಹೋಮ ಹವನ, ಪೂಜಾ ಕಾರ್ಯಕ್ರಮ ನಡೆಸಲಾಯಿತು.

ನಗರದ ಹಳೇ ಬಸ್ ನಿಲ್ದಾಣ ಬಳಿಯ ಸಿದ್ದಲಿಂಗಯ್ಯ ವೃತ್ತದಲ್ಲಿ ಏರ್ಪಡಿಸಿದ್ದ ಕರಗ ನೃತ್ಯ ಪ್ರದರ್ಶನವನ್ನು ಕಣ್ತುಂಬಿಕೊಂಡ ಭಕ್ತಮಹಾಶಯರು. ಕರಗ ನೃತ್ಯ ಪ್ರದರ್ಶನವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಸಂಭ್ರಮಿಸಿದ ಜನಸ್ತೋಮ.

ವೇದಿಕೆ ನೃತ್ಯ‌ ಪ್ರದರ್ಶನ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಕರಗ ಮೆರವಣಿಗೆ ನಡೆಸಲಾಯಿತು. ಕರಗ ತಮ್ಮ ಮನೆಗಳು, ಬೀದಿಗಳ‌ ಬಳಿ ಬಂದಾಗ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ, ತಮ್ಮ ಹರಕೆ ಹೊತ್ತು ದೇವಿಗೆ ನಮಿಸಿದ ಭಕ್ತರು. ಕರಗ ಸಾಗುವ ವೇಳೆ ಭಕ್ತರು ಮಲ್ಲಿಗೆಯ ಹೂಮಳೆಯ ಸುರಿಸಿ ಭಕ್ತಿಯಲ್ಲಿ ಮಿಂದೆದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

5 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

16 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

20 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

23 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago