ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಚೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಹರ್ ಘರ್ ತಿರಂಗ್ ಅಭಿಯಾನ ನಡೆಸಲಾಯಿತು.
76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಮ್ಮ ರಾಷ್ಟ್ರ ಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ರಾಷ್ಟ್ರಧ್ವಜದ ಹಿರಿಮೆಯನ್ನು ಅರಿಯುವುದರೊಂದಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳುವಳಿಕೆಯನ್ನು ಹೊಂದಬೇಕಾಗಿದೆ. ರಾಷ್ಟ್ರದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಯೊಂದು ಮನೆಯ ಮೇಲೆ ಹಾರಿಸುವ ಮೂಲಕ ಸಂಭ್ರಮಿಸಬೇಕಾಗಿದೆ ಎಂದರು.
ರಾಷ್ಟ್ರಧ್ವಜದ ಸಂಹಿತೆಯಂತೆ ಧ್ವಜಾರೋಹಣ ಮತ್ತು ಅವರೋಹಣ ಕ್ರಮವನ್ನು ಪಾಲಿಸಬೇಕು. ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು ಎಂದರು.
ದೊಡ್ಡಬಳ್ಳಾಪುರ ಉಪವಿಭಾಗದ ಅಂಚೆ ನಿರೀಕ್ಷಕರಾದ ಹರಿಪ್ರಕಾಶ್ ಮಾತನಾಡಿ, ಪ್ರತಿ ವರ್ಷವು ಅಂಚೆ ಇಲಾಖೆಯ ವತಿಯಿಂದ ಹರ್ ಘರ್ ತಿರಂಗ್ ಅಭಿಯಾನವನ್ನು ನಡೆಸಲಾಗುತ್ತಿದೆ. ರಾಷ್ಟ್ರೀಯ ಭಾವೈಕ್ಯತೆ ಮತ್ತು ರಾಷ್ಟ್ರಪ್ರೇಮವನ್ನು ಮೂಡಿಸುವ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗ್ ಅಭಿಯಾನ ಪ್ರಾರಂಭಿಸಿದೆ ಎಂದರು.
ಈ ಅಭಿಯಾನದ ಮೂಲಕ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ರಾಷ್ಟ್ರಧ್ವಜವನ್ನು ಪ್ರತಿಯೊಬ್ಬರ ಮನೆಯ ಮೇಲೆ ಹಾರಿಸುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವು ಸಾರ್ವಜನಿಕರು ಹರ್ ಘರ್ ತಿರಂಗ್ ಅಭಿಯಾನಕ್ಕೆ ಉತ್ತಮ ಪ್ರೋತ್ಸಾಹ ಮತ್ತು ಸಹಕಾರ ನೀಡುತ್ತಿದ್ದಾರೆ ಎಂದರು.
ಅಭಿಯಾನದಲ್ಲಿ ದೊಡ್ಡಬಳ್ಳಾಪುರ ಅಂಚೆ ಕಾರ್ಯಾಲಯದ ಮುಖ್ಯಸ್ಥರಾದ ಬಸವರಾಜು, ಅಧಿಕಾರಿಗಳಾದ ಆರ್.ಕೃಷ್ಣಮೂರ್ತಿ, ಎಚ್.ಮುನಿಸಂಜೀವಯ್ಯ, ಡಿ.ಸಿ.ಮೋಹನ್ ಕುಮಾರ್, ನಿರ್ಮಲಬಾಯಿ, ವಸಂತಬಾಯಿ ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…