ನಗರದಲ್ಲಿ ಹರ್ ಘರ್ ತಿರಂಗ ಅಭಿಯಾನ: ರಾಷ್ಟ್ರ ಧ್ವಜಕ್ಕೆ ಗೌರವ

ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಚೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ನಗರದ  ಪ್ರಮುಖ ರಸ್ತೆಗಳಲ್ಲಿ ಹರ್ ಘರ್ ತಿರಂಗ್ ಅಭಿಯಾನ ನಡೆಸಲಾಯಿತು.

76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಮ್ಮ ರಾಷ್ಟ್ರ ಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ರಾಷ್ಟ್ರಧ್ವಜದ ಹಿರಿಮೆಯನ್ನು  ಅರಿಯುವುದರೊಂದಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳುವಳಿಕೆಯನ್ನು ಹೊಂದಬೇಕಾಗಿದೆ. ರಾಷ್ಟ್ರದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಯೊಂದು ಮನೆಯ ಮೇಲೆ ಹಾರಿಸುವ ಮೂಲಕ ಸಂಭ್ರಮಿಸಬೇಕಾಗಿದೆ ಎಂದರು.

ರಾಷ್ಟ್ರಧ್ವಜದ ಸಂಹಿತೆಯಂತೆ  ಧ್ವಜಾರೋಹಣ ಮತ್ತು ಅವರೋಹಣ ಕ್ರಮವನ್ನು ಪಾಲಿಸಬೇಕು.      ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು ಎಂದರು.

ದೊಡ್ಡಬಳ್ಳಾಪುರ ಉಪವಿಭಾಗದ ಅಂಚೆ ನಿರೀಕ್ಷಕರಾದ ಹರಿಪ್ರಕಾಶ್ ಮಾತನಾಡಿ,  ಪ್ರತಿ ವರ್ಷವು ಅಂಚೆ ಇಲಾಖೆಯ ವತಿಯಿಂದ ಹರ್ ಘರ್ ತಿರಂಗ್ ಅಭಿಯಾನವನ್ನು ನಡೆಸಲಾಗುತ್ತಿದೆ. ರಾಷ್ಟ್ರೀಯ ಭಾವೈಕ್ಯತೆ ಮತ್ತು ರಾಷ್ಟ್ರಪ್ರೇಮವನ್ನು ಮೂಡಿಸುವ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗ್ ಅಭಿಯಾನ ಪ್ರಾರಂಭಿಸಿದೆ ಎಂದರು.

ಈ ಅಭಿಯಾನದ ಮೂಲಕ ದೊಡ್ಡಬಳ್ಳಾಪುರ  ತಾಲ್ಲೂಕಿನಲ್ಲಿ   ರಾಷ್ಟ್ರಧ್ವಜವನ್ನು ಪ್ರತಿಯೊಬ್ಬರ ಮನೆಯ ಮೇಲೆ  ಹಾರಿಸುವಂತೆ  ಮನವಿ ಮಾಡಿಕೊಳ್ಳಲಾಗುತ್ತಿದೆ.   ಪ್ರತಿ ವರ್ಷದಂತೆ ಈ ವರ್ಷವು ಸಾರ್ವಜನಿಕರು ಹರ್ ಘರ್ ತಿರಂಗ್ ಅಭಿಯಾನಕ್ಕೆ ಉತ್ತಮ ಪ್ರೋತ್ಸಾಹ  ಮತ್ತು ಸಹಕಾರ ನೀಡುತ್ತಿದ್ದಾರೆ ಎಂದರು.

ಅಭಿಯಾನದಲ್ಲಿ ದೊಡ್ಡಬಳ್ಳಾಪುರ ಅಂಚೆ ಕಾರ್ಯಾಲಯದ ಮುಖ್ಯಸ್ಥರಾದ ಬಸವರಾಜು, ಅಧಿಕಾರಿಗಳಾದ ಆರ್.ಕೃಷ್ಣಮೂರ್ತಿ, ಎಚ್.ಮುನಿಸಂಜೀವಯ್ಯ, ಡಿ.ಸಿ.ಮೋಹನ್ ಕುಮಾರ್, ನಿರ್ಮಲಬಾಯಿ, ವಸಂತಬಾಯಿ ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

6 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

10 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago