Categories: ಕೋಲಾರ

ನಗರದ ಅಭಿವೃದ್ಧಿಗೆ ಸಹಕಾರ ಮತ್ತು ಮಾರ್ಗದರ್ಶನದ ಭರವಸೆ ನೀಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದ ಅಭಿವೃದ್ಧಿಗೆ ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಮಾರ್ಗದರ್ಶನ ಮಾಡಲಿದ್ದು, ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಮಾದರಿ ನಗರಸಭೆ ಯಾಗಿಸುವಂತೆ ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ಬುಧವಾರ ಕೋಲಾರ ನಗರಸಭೆಯಲ್ಲಿ ನೂತನ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಹಾಗೂ ಉಪಾಧ್ಯಕ್ಷೆ ಸಂಗೀತಾ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ನಗರಸಭೆಯ ಆಡಳಿತ ಮಂಡಳಿಯ ಚುಕ್ಕಾಣಿಯನ್ನು ಹೆಣ್ಣು ಮಕ್ಕಳೇ ವಹಿಸಿದ್ದಾರೆ ಮನೆಯ ಜವಾಬ್ದಾರಿಯನ್ನು ವಹಿಸಿ ಹೇಗೆ ನಿಭಾಯಿಸುತ್ತಾರೆ ಅದೇ ರೀತಿ ಸಹ ನಗರಸಭೆಯನ್ನು ಅಭಿವೃದ್ದಿಯ ಕಡೆಗೆ ತರಲಿದ್ದಾರೆ ನಗರಸಭೆಯಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನೂತನ ಅಧ್ಯಕ್ಷರು ಉಪಾಧ್ಯಕ್ಷರು ಮಾಡಬೇಕಾಗಿದೆ ಎಂದರು.

ನಗರಸಭೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಕಛೇರಿಗೆ ಮಾತ್ರ ಸೀಮಿತವಾಗದೇ ನಗರವನ್ನು ಸಂಚರಿಸಿ ಸಮಸ್ಯೆಗಳನ್ನು ಪಟ್ಟಿ ಮಾಡಿ ಅಧಿಕಾರಿಗಳಿಂದ ಪರಿಹಾರವನ್ನು ಕಂಡುಕೊಳ್ಳುವ ಕೆಲಸ ಮಾಡಬೇಕು ತಮಗೆ ಸಿಕ್ಕಿರುವ ಅಧಿಕಾರದಿಂದ ಮಾದರಿ ನಗರಸಭೆಯಾಗಿ ಮಾಡಬೇಕು ಯಾವುದೇ ಕಾರಣಕ್ಕೂ ಅಧಿಕಾರದ ದುರುಪಯೋಗ ವಾಗದಂತೆ ಕ್ರಮ ವಹಿಸಬೇಕು ನಗರಸಭೆಯಲ್ಲಿ ಇವತ್ತಿನ ಪರಿಸ್ಥಿತಿಯನ್ನು ಸರಿಪಡಿಸಬೇಕು ಮುಂದೆ ಹಂತಹಂತವಾಗಿ ನಗರದಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು ಸಮಸ್ಯೆಗಳ ಪರಿಹಾರಕ್ಕೆ ನಾನು ಎಂಎಲ್ಸಿಗಳು ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.

ನಗರದಲ್ಲಿನ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ನಗರಕ್ಕೆ ಯರಗೋಳ್ ನೀರು ಹರಿಯುತ್ತಿದ್ದು, ಎಲ್ಲ ಹಾಸ್ಟೆಲ್‌ಗಳಿಗೂ ಬಾಕಿ ಕೆಲಸಗಳಿಗೆ ವೇಗ ನೀಡಿ ಪ್ರತಿಯೊಂದು ಮನೆಗೂ ನೀರು ಹರಿಸುವ ಕೆಲಸ ಮಾಡಬೇಕು ಅಧ್ಯಕ್ಷರಾಗಿ ಅವರ ಕೆಲಸ ಅವರೇ ಮಾಡಿಕೊಂಡು ಹೋಗುತ್ತಾರೆ ನಗರಸಭೆಯಲ್ಲಿ ಹಣ ನೀಡದೆ ಯಾವುದೇ ಕೆಲಸ ಆಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಲು ಕ್ರಮಕೈಗೊಳ್ಳುವುದಾಗಿ ಹೇಳಿದ ಅವರು, ಸದ್ಯಕ್ಕೆ ಪೌರಾಯುಕ್ತರ ಹುದ್ದೆ ಖಾಲಿಯಿದ್ದು, ಒಳ್ಳೆಯವರನ್ನು ನೇಮಕ ಮಾಡಲು ಇಲಾಖೆಯ ಸಚಿವರಿಗೆ ಮನವಿ ಮಾಡಲಾಗಿದೆ. ೨-೩ ದಿನಗಳಲ್ಲಿ ಜನಪರ ಕಾಳಜಿಯುಳ್ಳ ವ್ಯಕ್ತಿಯನ್ನೇ ನೇಮಕ ಮಾಡಲಿದ್ದಾರೆ. ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್‌ಕುಮಾರ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಕುರಿಗಳ ರಮೇಶ್, ಜಗದೀಶ್, ಚಂದ್ರಮೌಳಿ,ಸೇರಿದಂತೆ ನಗರಸಭೆ ಸದಸ್ಯರು, ಮಾಜಿ ಸದಸ್ಯರು ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

2 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

6 hours ago

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

10 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

11 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

21 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

21 hours ago