ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತಿ ಅನಿರ್ಬಂಧಿತ ಅನುದಾನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ರೀತಿಯ ವಿಕಲಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅತ್ಯಾಧುನಿಕ ಇ -ಲೈಬ್ರರಿಯನ್ನು ದೊಡ್ಡಬಳ್ಳಾಪುರ ನಗರದ ಹಳೆ ಹೆರಿಗೆ ಆಸ್ಪತ್ರೆ ಬಳಿಯ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಪ್ರಾರಂಭ ಮಾಡಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ವ್ಯಾಸಂಗ ಮಾಡುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಕಲಚೇತನರು ಈ ಯೋಜನೆಯ ಸೌಲಭ್ಯವನ್ನು ಉಚಿತವಾಗಿ ಪಡೆಯಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಎನ್.ಎಂ. ಜಗದೀಶ್ ತಿಳಿಸಿದ್ದಾರೆ.