ರಾಜಧಾನಿ ಬೆಂಗಳೂರು ನಗರದ ಸಮೀಪದಲ್ಲಿರುವ ದೊಡ್ಡಬಳ್ಳಾಪುರ ನಗರವೂ ದಿನೇ ದಿನೇ ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ನಗರವಾಗಿದೆ. ನಗರದ ಜನಸಂಖ್ಯೆ ಒಂದು ಲಕ್ಷದ ಗಡಿಯನ್ನು ಮೀರಿದೆ.
ಪ್ರತಿನಿತ್ಯ ನಗರದಲ್ಲಿನ ಡಾ.ಬಿಆರ್ ಅಂಬೇಡ್ಕರ್ ವೃತ್ತ, ಡಿ.ಕ್ರಾಸ್ ವೃತ್ತ, ರೈಲ್ವೆ ನಿಲ್ದಾಣ ವೃತ್ತ, ತಾಲೂಕು ಕಚೇರಿ ವೃತ್ತ, ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಟ್ರಾಫಿಕ್ ಪೊಲೀಸ್ ಹಾಗೂ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ಅವಶ್ಯಕ ಮತ್ತು ಜರೂರಾಗಿತ್ತು.
ಇದೀಗ ಇದೇ ಮೊದಲ ಬಾರಿಗೆ ಪ್ರಪ್ರಥಮವಾಗಿ ದೊಡ್ಡಬಳ್ಳಾಪುರ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ(ಪ್ರವಾಸಿ ಮಂದಿರ ಸರ್ಕಲ್)ದಲ್ಲಿ ಆತ್ಯಾಧುನಿಕ ತಂತ್ರಜ್ಞಾನದ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ.
ಜಿಬ್ರಾ ಲೈನ್, ಸಂಚಾರಿ ನಿಯಮಗಳ ಪಾಲನೆ ಇಲ್ಲ:
ಇದೇ ಮೊದಲ ಬಾರಿಗೆ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುತ್ತಿರುವುದರಿಂದ ಸಾರ್ವಜನರಿಗೆ ಟ್ರಾಫಿಕ್ ಲೈನ್‌ಗಳ ಬಗ್ಗೆ ತಿಳುವಳಿಕೆ ಅಗತ್ಯವಾಗಿದ್ದು, ಸಿಗ್ನಲ್ ಅಳವಡಿಸಿರುವ ವೃತ್ತದಲ್ಲಿ ಜಿಬ್ರಾ ಲೈನ್‌ಗಳು, ಸಂಚಾರಿ ನಿಯಮಗಳ ನಾಮಫಲಗಳನ್ನು ಅಳವಡಿಸುವ ಅವಶ್ಯಕತೆ ಇದೆ. ಜಿಬ್ರಾ ಲೈನ್‌ಗಳಿಲ್ಲದೆ ಸಾರ್ವಜನಿಕರು ಎಲ್ಲೆಂದರಲ್ಲೆ ವಾಹನಗಳನ್ನು ನಿಲ್ಲಿಸುವಂತ ಪರಿಸ್ಥಿತಿ ಎದುರಾಗಿದೆ.
ನಗರದಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಅವಶ್ಯಕ:
ನಗರದಲ್ಲಿ ತಾಲೂಕು ಕಚೇರಿ, ಮುಖ್ಯರಸ್ತೆ, ರುಮಾಲೆ ಛತ್ರದ ರಸ್ತೆ, ಬಸ್ ನಿಲ್ದಾಣ, ಚೌಕ, ಡಿ.ಕ್ರಾಸ್, ರೈಲ್ವೆ ನಿಲ್ದಾಣ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಹೀಗೆ ನಗರದ ಇಕ್ಕೆಲಗಳಲ್ಲಿ ದಿನವಿಡಿ ವಾಹನಗಳ ಸವಾರರು ತಾ ಮುಂದೆ. ನಾ ಮುಂದೆ ಎಂಬಂತೆ ಪೈಪೋಟಿಗೆ ಬಿದ್ದು ವಾಹನಗಳನ್ನು ಚಲಾಯಿಸುತ್ತಾರೆ. ಯಾವುದೇ ಸಂಚಾರಿ ನಿಯಮಗಳನ್ನೂ ಯಾರೊಬ್ಬರೂ ಪಾಲಿಸುತ್ತಿಲ್ಲ.
ಅಪಘಾತವಾದ ಸಂದರ್ಭದಲ್ಲಿ ಮಾತ್ರ ಕಾನೂನುಗಳ ಬಗ್ಗೆ ಜನ ಪುಂಕಾನುಪುಂಕ ಮಾತನಾಡುತ್ತಾರೆ. ಜನಸಂಖ್ಯೆಯೂ ಹೆಚ್ಚಿರುವುದರಿಂದ ವಾಹನಗಳ ಸಂಖ್ಯೆಯೂ ಪ್ರತಿನಿತ್ಯ ಹೆಚ್ಚುತ್ತಲೆ ಇದೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮೂರು ತಾಲೂಕುಗಳಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಕರ್ತವ್ಯ ನಿರ್ವಹಿಸುತ್ತಿದೆ. ದೊಡ್ಡಬಳ್ಳಾಪುರಕ್ಕೂ ಟ್ರಾಫಿಕ್ ಪೊಲೀಸ್ ಠಾಣೆ ಅಗತ್ಯವಾಗಿದೆ.
ಮತ್ತಷ್ಟು ಪಾಯಿಂಟ್‌ಗಳಲ್ಲಿ ಬೇಕಿದೆ ಸಿಗ್ನಲ್:
ಪ್ರತಿನಿತ್ಯ ಬೆಳ್ಳಂಬೆಳ್ಳಗ್ಗೆಯಿಂದ ರಾತ್ರಿ 10 ಗಂಟೆವರೆಗೂ ವಾಹನ ದಟ್ಟಣೆಯಿರುವ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯಕತೆ ಇದ್ದರೆ.ಬಸ್ ನಿಲ್ದಾಣ, ತಾಲೂಕು ಕಚೇರಿ ವೃತ್ತ, ಚೌಕ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ, ಹೀಗೆ ಹಲವು ಭಾಗದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ನಿಯೋಜನೆ ಅತ್ಯಂತ ಶೀಘ್ರವಾಗಿ ಆಗಬೇಕಿದೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…