ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ; ಸಾರ್ವಜನಿಕರಿಂದ ಉತ್ತಮ ಸ್ಪಂದನೆ

ರಾಜಧಾನಿ ಬೆಂಗಳೂರು ನಗರದ ಸಮೀಪದಲ್ಲಿರುವ ದೊಡ್ಡಬಳ್ಳಾಪುರ ನಗರವೂ ದಿನೇ ದಿನೇ ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ನಗರವಾಗಿದೆ. ನಗರದ ಜನಸಂಖ್ಯೆ ಒಂದು ಲಕ್ಷದ ಗಡಿಯನ್ನು ಮೀರಿದೆ.

ಪ್ರತಿನಿತ್ಯ ನಗರದಲ್ಲಿನ ಡಾ.ಬಿಆರ್ ಅಂಬೇಡ್ಕರ್ ವೃತ್ತ, ಡಿ.ಕ್ರಾಸ್ ವೃತ್ತ, ರೈಲ್ವೆ ನಿಲ್ದಾಣ ವೃತ್ತ, ತಾಲೂಕು ಕಚೇರಿ ವೃತ್ತ, ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಟ್ರಾಫಿಕ್ ಪೊಲೀಸ್ ಹಾಗೂ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ಅವಶ್ಯಕ ಮತ್ತು ಜರೂರಾಗಿತ್ತು.

ಇದೀಗ ಇದೇ ಮೊದಲ ಬಾರಿಗೆ ಪ್ರಪ್ರಥಮವಾಗಿ ದೊಡ್ಡಬಳ್ಳಾಪುರ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ(ಪ್ರವಾಸಿ ಮಂದಿರ ಸರ್ಕಲ್)ದಲ್ಲಿ ಆತ್ಯಾಧುನಿಕ ತಂತ್ರಜ್ಞಾನದ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ.

ಜಿಬ್ರಾ ಲೈನ್, ಸಂಚಾರಿ ನಿಯಮಗಳ ಪಾಲನೆ ಇಲ್ಲ:

ಇದೇ ಮೊದಲ ಬಾರಿಗೆ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುತ್ತಿರುವುದರಿಂದ ಸಾರ್ವಜನರಿಗೆ ಟ್ರಾಫಿಕ್ ಲೈನ್‌ಗಳ ಬಗ್ಗೆ ತಿಳುವಳಿಕೆ ಅಗತ್ಯವಾಗಿದ್ದು, ಸಿಗ್ನಲ್ ಅಳವಡಿಸಿರುವ ವೃತ್ತದಲ್ಲಿ ಜಿಬ್ರಾ ಲೈನ್‌ಗಳು, ಸಂಚಾರಿ ನಿಯಮಗಳ ನಾಮಫಲಗಳನ್ನು ಅಳವಡಿಸುವ ಅವಶ್ಯಕತೆ ಇದೆ. ಜಿಬ್ರಾ ಲೈನ್‌ಗಳಿಲ್ಲದೆ ಸಾರ್ವಜನಿಕರು ಎಲ್ಲೆಂದರಲ್ಲೆ ವಾಹನಗಳನ್ನು ನಿಲ್ಲಿಸುವಂತ ಪರಿಸ್ಥಿತಿ ಎದುರಾಗಿದೆ.

ನಗರದಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಅವಶ್ಯಕ:

ನಗರದಲ್ಲಿ ತಾಲೂಕು ಕಚೇರಿ, ಮುಖ್ಯರಸ್ತೆ, ರುಮಾಲೆ ಛತ್ರದ ರಸ್ತೆ, ಬಸ್ ನಿಲ್ದಾಣ, ಚೌಕ, ಡಿ.ಕ್ರಾಸ್, ರೈಲ್ವೆ ನಿಲ್ದಾಣ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಹೀಗೆ ನಗರದ ಇಕ್ಕೆಲಗಳಲ್ಲಿ ದಿನವಿಡಿ ವಾಹನಗಳ ಸವಾರರು ತಾ ಮುಂದೆ. ನಾ ಮುಂದೆ ಎಂಬಂತೆ ಪೈಪೋಟಿಗೆ ಬಿದ್ದು ವಾಹನಗಳನ್ನು ಚಲಾಯಿಸುತ್ತಾರೆ. ಯಾವುದೇ ಸಂಚಾರಿ ನಿಯಮಗಳನ್ನೂ ಯಾರೊಬ್ಬರೂ ಪಾಲಿಸುತ್ತಿಲ್ಲ.

ಅಪಘಾತವಾದ ಸಂದರ್ಭದಲ್ಲಿ ಮಾತ್ರ ಕಾನೂನುಗಳ ಬಗ್ಗೆ ಜನ ಪುಂಕಾನುಪುಂಕ ಮಾತನಾಡುತ್ತಾರೆ. ಜನಸಂಖ್ಯೆಯೂ ಹೆಚ್ಚಿರುವುದರಿಂದ ವಾಹನಗಳ ಸಂಖ್ಯೆಯೂ ಪ್ರತಿನಿತ್ಯ ಹೆಚ್ಚುತ್ತಲೆ ಇದೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮೂರು ತಾಲೂಕುಗಳಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಕರ್ತವ್ಯ ನಿರ್ವಹಿಸುತ್ತಿದೆ. ದೊಡ್ಡಬಳ್ಳಾಪುರಕ್ಕೂ ಟ್ರಾಫಿಕ್ ಪೊಲೀಸ್ ಠಾಣೆ ಅಗತ್ಯವಾಗಿದೆ.

ಮತ್ತಷ್ಟು ಪಾಯಿಂಟ್‌ಗಳಲ್ಲಿ ಬೇಕಿದೆ ಸಿಗ್ನಲ್:

ಪ್ರತಿನಿತ್ಯ ಬೆಳ್ಳಂಬೆಳ್ಳಗ್ಗೆಯಿಂದ ರಾತ್ರಿ 10 ಗಂಟೆವರೆಗೂ ವಾಹನ ದಟ್ಟಣೆಯಿರುವ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯಕತೆ ಇದ್ದರೆ.ಬಸ್ ನಿಲ್ದಾಣ, ತಾಲೂಕು ಕಚೇರಿ ವೃತ್ತ, ಚೌಕ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ, ಹೀಗೆ ಹಲವು ಭಾಗದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ನಿಯೋಜನೆ ಅತ್ಯಂತ ಶೀಘ್ರವಾಗಿ ಆಗಬೇಕಿದೆ.

 

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

12 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

14 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

16 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

16 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

18 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

23 hours ago