ಗೋಕಾಕ್ ಹೋರಾಟದ ಸಮಯದಲ್ಲಿ ನಮ್ಮ ಶಿಕ್ಷಣ ಸಂಸ್ಥೆಗೆ ಆಂಗ್ಲ ಮಾಧ್ಯಮಕ್ಕೆ ಅನುಮತಿ ದೊರೆತಿದೆ. 1981ರಲ್ಲಿ ಆರಂಭವಾದ ಶಿಕ್ಷಣ ಸಂಸ್ಥೆಯಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಮತ್ತು ಶಿಕ್ಷಣದ ಗುಣಮಟ್ಟದ ಹೆಚ್ಚಿಸಿಕೊಳ್ಳುತ್ತಿರುವುದರಿಂದ ಪೋಷಕರು ಕೂಡ ನಮ್ಮ ಶಿಕ್ಷಣ ಸಂಸ್ಥೆ ಮೇಲೆ ವಿಶ್ವಾಸ ಇರಿಸಿದ್ದಾರೆ ಎಂದು ಶಾಲಾ ಕಾರ್ಯದರ್ಶಿ ಪುರುಷೋತ್ತಮ ಅವರು ಹೇಳಿದರು
ನಗರದ ನಿವೇದಿತಾ ಆಂಗ್ಲ ಶಾಲೆಯಲ್ಲಿ ಶುಕ್ರವಾರ 2022-23 ನೇ ಸಾಲಿನ ವಾರ್ಷಿಕೋತ್ಸವ ಮತ್ತು ಎಸ್ಎಸ್ಎಲ್ ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ವಿದ್ಯಾರ್ಜನೆ ನೀಡುವ ದೇವಾಲಯಗಳು ಆಗಬೇಕೆ ಹೊರತು ಕೇವಲ ಪೋಷಕರಿಂದ ಶುಲ್ಕ ವಸೂಲಿ ಕೇಂದ್ರಗಳಾಗಬಾರದು. ಶಿಕ್ಷಣ ಅತ್ಯುತ್ತಮ ಸೇವೆಯಾಗಿದೆ. ಅದು ವ್ಯಾಪಾರದ ಸರಕಾಗಬಾರದು ಎಂದು ನಿವೃತ್ತ ಎಸಿಪಿ ಸುಬ್ಬಣ್ಣ ತಿಳಿಸಿದರು.
ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ಮಂದಿ ಎಲ್ಲಾ ಕ್ಷೇತ್ರಗಳಲ್ಲಿಯೂ ಉನ್ನತ ಹುದ್ದೆಯಲ್ಲಿದ್ದಾರೆ. ಸುಮಾರು 40ಕ್ಕೂ ಹೆಚ್ಚು ವರ್ಷಗಳಿಂದ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಮುಖಾಂತರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿಯೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡುರುವುದು ಹೆಮ್ಮೆಯ ವಿಷಯ. ಇದಕ್ಕೆ ಸಾಕ್ಷಿ ಪ್ರತಿವರ್ಷ ಶಾಲೆಯ ಎಸ್ಎಸ್ಎಲ್ ಫಲಿತಾಂಶವೇ ಆಗಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…