ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳು: ಸ್ವಚ್ಚಗೊಳಿಸದ ನಗರಸಭೆ: ವಕೀಲರ ಸಂಘದಿಂದ ನ್ಯಾಯಾಧೀಶರಿಗೆ ದೂರು

ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳಿಂದ ಕೂಡಿದ್ದು, ದೊಡ್ಡಬಳ್ಳಾಪುರ ನಗರಸಭೆ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ನ್ಯಾಯಾಧೀಶರಿಗೆ ವಕೀಲರ ಸಂಘದಿಂದ ದೂರು ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ವಕೀಲರು, ನ್ಯಾಯಾಲಯದ ಆವರಣದ ಸ್ವಚ್ಛತೆ ನಗರಸಭೆಯ ಕರ್ತವ್ಯವಾಗಿದೆ. ಆದರೆ ನ್ಯಾಯಾಲಯದ ಒಳಂಗಣ ವಕೀಲ ಸಂಘ ಆವರಣದಲ್ಲಿ ಸ್ವಚ್ಚತೆ ಇಲ್ಲವಾಗಿದ್ದು, ತ್ಯಾಜ್ಯದಿಂದ ತುಂಬಿದೆ.

ಈ ಮುಂಚೆ ಕೂಡ ನ್ಯಾಯಾಲಯದ ಮುಂಭಾಗದ ಒಳಚರಂಡಿ ಅವ್ಯವಸ್ಥೆ ಕುರಿತು ನಗರಸಭೆ ಬೇಜವಬ್ದಾರಿ ತೋರಿದ ಕಾರಣ ನ್ಯಾಯಾಲಯ ಎಚ್ಚರಿಕೆ ನೀಡಿತ್ತು. ಆ ಬಳಿಕ ನಗರಸಭೆ ಎಚ್ಚರಗೊಂಡು ಕೆಲಸ ಮಾಡಿತ್ತು ಎನ್ನಲಾಗಿದೆ.

ಆದರೆ ನಗರಸಭೆ ಪದೇ ಪದೇ ತನ್ನ ಕೆಲಸ ಮರೆಯುತ್ತಿದ್ದು, ನ್ಯಾಯಾಲಯದ ಆವರಣವನ್ನೇ ಸ್ವಚ್ಛಗೊಳಿಸದ ನಗರಸಭೆ.. ದೊಡ್ಡಬಳ್ಳಾಪುರ ನಗರವನ್ನು ಹೇಗೆ ಸ್ವಚ್ಛ ಗೊಳಿಸುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.

ಇಂದು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸದ ನಗರಸಭೆ ಕುರಿತಂತೆ ವಕೀಲರ ಸಂಘ ಪದಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದೆ. ನ್ಯಾಯಾಲಯ ನಗರಸಭೆಯ ಮೇಲೆ ಕ್ರಮ ಜರುಗಿಸುವ ಮುನ್ನ ಎಚ್ಚೆತ್ತು, ನ್ಯಾಯಾಲಯದ ಆವರಣ ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ, ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಎಂ.ಮುನಿರಾಜು, ಜಂಟಿ ಕಾರ್ಯದರ್ಶಿ ವಿಜಯ್ ಕುಮಾರ್, ಸಯ್ಯದ್ ನಾಸಿಮ್, ವಕೀಲರಾದ ಮುಲ್ತಾಸ್, ಪ್ರವೀಣ್ ಕುಮಾರ್ ಗುಪ್ತ, ಚಂದೇಶ್ ಗೌಡ, ಪ್ರಭಾಕರ್, ಲೀಲಾವತಿ, ಅನಿತಾ, ಅನುಪಮಾ ಹೆಚ್, ಉಮೇಶ್, ಮೋಹನ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

20 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago