ಇಂದು ನಾಡಿನಾದ್ಯಂತ 68ನೇ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆ ನಗರದ ನ್ಯಾಷನಲ್ ಪ್ರೈಡ್ ಶಾಲಾ ಆವರಣದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ಧ್ವಜಾರೋಹಣ” ನೆರವೇರಿಸಿ, ಕನ್ನಡ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
ಶಿಕ್ಷಕರು ಮತ್ತು ಶಾಲಾ ವಿದ್ಯಾರ್ಥಿಗಳು ಕೆಂಪು ಮತ್ತು ಹಳದಿ ಉಡುಪು ಧರಿಸಿ ಕನ್ನಡದ ಕಂಪು ಹರಡಿದರು. ನಂತರ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡುವ ಮೂಲಕ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಯ, ಅಡಳಿತಾಧಿಕಾರಿ, ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.