ದೊಡ್ಡಬಳ್ಳಾಪುರ ತಾಲ್ಲೂಕು ಬಸವ ಭವನದಿಂದ ಕೆಸಿಪಿ ಸರ್ಕಲ್‌ವರೆಗೂ ರಾಷ್ಟ್ರೀಯ ಹೆದ್ದಾರಿ-4ನೇ ನೆಲಮಂಗಲದಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ-7ಕ್ಕೆ ಚಿಕ್ಕಬಳ್ಳಾಪುರ ಸೇರುವ ರಾಜ್ಯ ಹೆದ್ದಾರಿ -74 ರ ರಸ್ತೆಯ ಸರಪಳಿ 27.90 ರಿಂದ 31.40 ಕಿಮೀ ವರೆಗೆ 10 ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ /ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಅವರು ನಗರದ ತಾಲೂಕು ಕಚೇರಿ ವೃತ್ತದಲ್ಲಿಂದು ಗುದ್ದಲಿ ಪೂಜೆ ನೆರವೇರಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಬಂದರೆ ನಗರದ ತಾಲೂಕು ಕಚೇರಿ ಮುಂದೆ ಹಾದು ಹೋಗುವ ರಸ್ತೆಯಲ್ಲಿ ಮೊಣಕಾಲುದ್ದ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕನ್ನಡ ಜಾಗೃತ ಪರಿಷತ್ ಭವನ ಸರ್ಕಲ್ ನಲ್ಲಿ ರಸ್ತೆ ಮಧ್ಯೆ ಮ್ಯಾನ್ ಹೋಲ್ ಸಮಸ್ಯೆ ಇದೆ. ಈ ರಸ್ತೆಯಲ್ಲಿ ಎಷ್ಟೇ ಬಾರಿ ಡಾಂಬಾರು ಹಾಕಿದರೂ ಸಮಸ್ಯೆ ಹಾಗೇ ಇರುತ್ತದೆ ಎಂದು ಪರಿಗಣಿಸಿ ಶಾಶ್ವತ ಪರಿಹಾರಕ್ಕಾಗಿ ಬಸವ ಭವನ ವೃತ್ತದಿಂದ ಟೋಲ್ ಗೇಟ್ ವೃತ್ತದವರೆಗೆ ಬಿಬಿಎಂಪಿ ಮಾದರಿಯ ವೈಟ್ ಟಾಪಿಂಗ್(ಕಾಂಕ್ರೀಟ್ ರಸ್ತೆ) ನಿರ್ಮಾಣ ಮಾಡಲು ನಿರ್ಧರಿಸಿ ಇಂದು ಗುದ್ದಲಿ ಪೂಜೆ ಮಾಡಲಾಗಿದೆ ಎಂದರು.
ನ್ಯಾಷನಲ್ ಪ್ರೈಡ್ ಶಾಲೆಯಿಂದ ಆಲಹಳ್ಳಿ ಅಂಡರ್ ಪಾಸ್ ವರೆಗೂ ಡಬಲ್ ರೋಡ್ ಆಗುತ್ತದೆ. ನಗರದ ನಾಲ್ಕು ದಿಕ್ಕುಗಳಲ್ಲಿ ಇರುವ ಆಗಮನ ಮತ್ತು ನಿರ್ಗಮನ ಸ್ಥಳಗಳಿಂದ ಡಬಲ್ ರೋಡ್ ಗಳು ಆಗುತ್ತವೆ ಎಂದರು.
ದೊಡ್ಡಬಳ್ಳಾಪುರ ಯೋಜನಾ ಪ್ರಾಧೀಕಾರ ಪ್ರತೀ ಸೈಟ್, ಲೇಔಟ್, ಪ್ಲಾನ್ ಅಪ್ರುವಲ್ ಗೆ ಹಣ ತೆಗೆದುಕೊಳ್ಳುತ್ತಾರೆ. ಡಿಪಿಯಯಲ್ಲಿ ಸುಮಾರು 14-16ಕೋಟಿ ಅನುದಾನವಿದೆ. ಅದನ್ನು ರಸ್ತೆ ಅಗಲೀಕರಣ ಸೇರಿದಂತೆ ದೊಡ್ಡಬಳ್ಳಾಪುರ ಅಭಿವೃದ್ಧೆಗೆ ಆ ಹಣವನ್ನು ವಿನಿಯೋಗಿಸಬೇಕು ಎಂದು ಒತ್ತಾಯಿಸಿದರು.
ದೇವನಹಳ್ಳಿ, ಹೊಸಕೋಟೆ, ನೆಲಮಂಗಲದ ಕಮರ್ಷಿಯಲ್ ಸ್ಥಳಗಳಲ್ಲಿ ರಸ್ತೆಗಳು ಅಗಲೀಕರಣಗೊಂಡಿವೆ. ಆದರೆ ನಮ್ಮ ದೊಡ್ಡಬಳ್ಳಾಪುರದಲ್ಲಿ ರಸ್ತೆ ಅಗಲೀಕರಣವಾಗದೇ ಜನರಿಗೆ ಕಿರಿಕಿರಿ ಉಂಟಾಗುತ್ತಿದೆ. ಕಿರಿದಾದ ರಸ್ತೆಗಳು ಅಗಲೀಕರಣವಾಗದ ಹೊರೆತು ದೊಡ್ಡಬಳ್ಳಾಪುರ ಅಭಿವೃದ್ಧಿಯಾಗಲು ಅಸಾಧ್ಯ ಎಂದರು.
ಡಿಪಿಎ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿಗಳೇ ನೀವು ನಗರಕ್ಕೆ ಏನಾದರೂ ಕೊಡುಗೆ ಕೊಡಬೇಕೆಂದುಕೊಂಡಿದ್ದರೆ ದಯಮಾಡಿ ರಸ್ತೆ ಅಗಲೀಕರಣಕ್ಕೆ ಅನುದಾನ ಬಿಡುಗಡೆ ಮಾಡಿ ಎಂದು ಹೇಳಿದರು.
ಈ ವೇಳೆ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಎಮ್ ಮಲ್ಲೇಶ್, ಸ್ಥಾಯಿ ಸಮಿತಿ ಅದ್ಯಕ್ಷ ಎಸ್ ರವಿಕುಮಾರ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್ ಸೇರಿದಂತೆ ಮತ್ತಿತರಿದ್ದರು.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…