ಇಂದು ಸಂಜೆ ನಗರದ ಲಾವಣ್ಯ ಸ್ಕೂಲ್ ಬಳಿ ಎರಡು ಕಾರುಗಳ ನಡುವೆ ಅಪಘಾತ. ಡಿಕ್ಕಿಯ ರಭಸಕ್ಕೆ ಕಾರುಗಳ ಮುಂಭಾಗ ಜಖಂಗೊಂಡಿದೆ. ಅಪಘಾತ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಆಗಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು.
ತುಮಕೂರು ಕಡೆಯಿಂದ ಬಂದ ಕಾರೊಂದು ಮೊದಲು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಅದೇ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರೋ ಚಾಲಕ.
ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ದೌಡಾಯಿಸಿ ವಾಹನ ದಟ್ಟಣೆ ನಿಯಂತ್ರಣ ಮಾಡಿದರು.
ಸದ್ಯ ದ್ವಿಚಕ್ರ ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಾಳಾಗಿದ್ದು, ಯಾವುದೇ ಪ್ರಾಣಾಪಯ ಸಂಭವಿಸಿಲ್ಲ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.