ನಾಲ್ಕು ಸಿಸಿ ಕ್ಯಾಮೆರಾ, ಕ್ರೀಡಾ ಕೊಠಡಿಯಲ್ಲಿದ್ದ ಕ್ರೀಡಾ ಸಾಮಾಗ್ರಿಗಳನ್ನು ಕದ್ದೋಯ್ದ ಘಟನೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ನವೆಂಬರ್ 17ರಂದು ನಡೆದಿದೆ.
ಒಂದು ಸಿಸಿ ಕ್ಯಾಮೆರಾ ಒಡೆದು ಹಾಕಿ, ಕ್ರೀಡಾ ಕೊಠಡಿಯ ಬೀಗ ಮುರಿದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸರಬರಾಜುಗೊಂಡಿದ್ದ ಥ್ರೋಬಾಲ್, 5ವಾಲಿಬಾಲ್, 6 ಶಟಲ್ ರಾಕೆಟ್, 6 ಬಾಲ್ ಬ್ಯಾಡ್ಮಿಂಟನ್ ರಾಕೆಟ್, 12 ಹ್ಯಾಂಡ್ ಬಾಲ್, 6ಫು ಟ್ ಬಾಲ್, 50 ಸ್ಕಿಪ್ಪಿಂಗ್ ರೋಪ್, 50ಟೆನ್ನಿಸ್ ಕಾಟ್, 3 ಸೈಡ್ ಡ್ರಮ್ಸ್, 1ಬೇಸ್ ಡ್ರಮ್, 4 ಕಬ್ಬಿಣದ ಪೋಲ್ ಗಳನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಕಳ್ಳರು.
ಉಪ ಪ್ರಾಂಶುಪಾಲರ ಕೊಠಡಿಯ ಬೀಗವನ್ನು ಒಡೆಯುವ ಯತ್ನ ಮಾಡಿರುವ ಕಳ್ಳರು, ಶಿಕ್ಷಕರ ಕೊಠಡಿಯಲ್ಲಿ ಕಬೋರ್ಡ್ ಗಳನ್ನು ತೆಗೆದು ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿದೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ದಿನೇದಿನೇ ಕಳ್ಳರ ಉಪಟಳ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಇತ್ತ ಗಮನಹರಿಸುವ ಕಾರ್ಯ ಮಾಡಬೇಕು.
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…
ಡಿಸೆಂಬರ್ 23...... ರೈತರಿಗೂ ಒಂದು ದಿನವಂತೆ..... ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ...... ಇತರ ಕೆಟ್ಟ…