ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳು ರಾರಾಜಿಸುತ್ತಿವೆ. ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳ ಹಾವಳಿ ದಿನದಿನಕ್ಕೆ ಹೆಚ್ಚುತ್ತಲಿದ್ದು, ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಉಪಾಧ್ಯಕ್ಷ ಸಿ.ನರಸಿಂಹಮೂರ್ತಿ ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಮುಖಂಡರ ಹುಟ್ಟಿದ ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಗಳು, ಬ್ಯಾನರ್ ಗಳು ಎಗ್ಗಿಲ್ಲದೆ ಎಲ್ಲೆಂದರಲ್ಲಿ ತಲೆಯೆತ್ತಿವೆ. ಆದರೆ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಸ್ತೆಗಳಲ್ಲಿ ಫ್ಲೆಕ್ಸ್ ಕಟ್ಟುವುದರಿಂದ ವಾಹನ ಸವಾರರಿಗೂ ಸಹ ಕಿರಿಕಿರಿ ಅನುಭವಿಸುವಂತಾಗಿದೆ. ಫ್ಲೆಕ್ಸ್ ಗಳಲ್ಲಿ ಅಳವಡಿಸಿರುವ ಮೊಳೆಗಳು ವಾಹನಗಳ ಟೈರ್ ಗಳಿಗೆ ಸಹ ಚುಚ್ಚುವ ಸಾಧ್ಯತೆಗಳಿವೆ. ಕೂಡಲೇ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಗಳನ್ನು ತೆರವು ಮಾಡಬೇಕೆಂದು ನಗರಸಭೆಗೆ ಮನವಿ ಮಾಡಿದರು.
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…