ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ- ನಗರಸಭೆ ಪೌರಾಯುಕ್ತ ಕೆ.ಪರಮೇಶ್

 

ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಪೌರ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿಸಿ ಜನರ ವಿಶ್ವಾಸ ಗಳಿಸಬೇಕಿದೆ ಎಂದು ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಹೇಳಿದರು.

ನಗರಸಭೆ ವತಿಯಿಂದ ನಗರದ ಜಗಜೀವನ ರಾಂ ಭವನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪೌರಕಾರ್ಮಿಕರು ರಾಜ್ಯ ಮಟ್ಟದಲ್ಲಿ ಸಂಘಟಿತರಾದ ಪರಿಣಾಮ ಇಂದು ಎಸ್.ಎಫ್.ಸಿ ಅನುದಾನದಲ್ಲಿ  ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ಹಿಂದೆ ಸ್ಥಳೀಯ ಸಂಸ್ಥೆಗಳಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಆದರೆ ಈಗ ಸ್ಥಳೀಯ ಸಂಸ್ಥೆಗಳು ಸದೃಢವಾಗಿದ್ದು, ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ನೀಡುತ್ತಿವೆ. ಪೌರ ಕಾರ್ಮಿಕರಿಗೆ ಜೀವ ವಿಮೆ ಮಾಡಿಸುವ ಮೂಲಕ ಸರ್ಕಾರ ಅವರಿಗೆ ಜೀವನ ಭದ್ರತೆ ಕಲ್ಪಿಸಿದೆ. ಸರ್ಕಾರದ ವತಿಯಿಂದ ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡಲು ಕ್ರಮ ವಹಿಸಲಾಗುವುದು ಪೌರ ಕಾರ್ಮಿಕರರು ತಮ್ಮ ಸಮಸ್ಯೆಗಳ ಬಗ್ಗೆ ಅಕಾರಿಗಳೊಂದಿಗೆ ಮುಕ್ತವಾಗಿ ತಿಳಿಸಿದರೆ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಪೌರ ಸೇವಾ ನೌಕರರ ಸೇವಾ ಸಂಘದ ನಗರ ಶಾಖೆ ಅಧ್ಯಕ್ಷ ತಿಪ್ಪಣ್ಣ ಮಾತನಾಡಿ, ಪೌರಕಾರ್ಮಿಕರ ಖಾಯಂ ಮಾಡಿರುವುದು ಸ್ವಾಗತಾರ್ಹವಾಗಿದೆ. ಆದರೆ ಸಮಾಜದಲ್ಲಿ ಪೌರಕಾರ್ಮಿಕರನ್ನು ಕೀಳಾಗಿ ನೋಡುವುದು ಇನ್ನೂ ಹೋಗಿಲ್ಲ. ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಪ್ರಕರಣಗಳು ಸಹ ನಡೆದಿವೆ. ಪೌರಕಾರ್ಮಿಕರಿಗೆ ರಕ್ಷಣೆ ನೀಡಬೇಕಿದ್ದು, ಶ್ರಮಿಕರಿಗೆ ಸಮಾಜ ಹಾಗೂ ಸಮುದಾಯ ಬೆಲೆ ನೀಡಬೇಕಿದೆ ಎಂದು ಹೇಳಿದರು.

ಪರಿಸರ ವಿಭಾಗದ ಸಹಾಯಕ ಅಭಿಯಂತರ ಈರಣ್ಣ ಪ್ರಸ್ತಾವಿಕವಾಗಿ ಮಾತನಾಡಿ, ಬಸವಲಿಂಗಪ್ಪ ಅವರು ಸಚಿವರಾಗಿದ್ದಾಗ ಮಲಹೊರುವ ಪದ್ದತಿಯನ್ನು ನಿಷೇಧಿಸಿದರು, ಪೌರಕಕಾರ್ಮಿಕರಿಗೆ ಆತ್ಮವಿಶ್ವಾಸ ಹಾಗೂ ಮನೋಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅವರಿಗಾಗಿ ಒಂದು ದಿನಾಚರಣೆಯ ಔಚಿತ್ಯ ಇದೆ ಎನ್ನುವುದನ್ನು ಮನಗಂಡು 2007ರಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮೀನಾರಾಯಣ್, ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪಾಂಡು ಸಿಂಧೆ, ಖಜಾಂಚಿ ವೆಂಕಟೇಶ ಬಾಬು ಸೇರಿದಂತೆ ನಗರಸಭಾ ಸದಸ್ಯರು, ಸಿಬ್ಬಂದಿ, ಪೌರಕಾರ್ಮಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

47 minutes ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

3 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

3 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

5 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

10 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

1 day ago