ನಗರದ ಹುತಾತ್ಮ ಪಿಎಸ್ಐ ಜಗದೀಶ್ ವೃತ್ತದ ಸಮೀಪ ಡಿವೈಡರ್ ಗೆ ಬೈಕ್ ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ನಗರದ ಹುತಾತ್ಮ ಪಿಎಸ್ಐ ಜಗದೀಶ್ ವೃತ್ತದ ಸಮೀಪ ಸವಾರನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಇಂದು ಸಂಜೆ 5ಗಂಟೆ ಸುಮಾರಿನಲ್ಲಿ ನಡೆದಿದೆ.

ಡಿಕ್ಕಿ ರಭಸಕ್ಕೆ ಆಕ್ಟಿವ್ ಹೋಂಡಾ ಬೈಕ್ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕೂಡಲೇ ಸ್ಥಳೀಯರು ಗಮನಿಸಿ ಸ್ಥಳಕ್ಕೆ ದೌಡಾಯಿಸಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಯಿತು. ಮಾಹಿತಿ ಮೇರೆಗೆ ನಗರ ಠಾಣಾ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಗಾಯಾಳುವಿನ ವಿಳಾಸ, ಹೆಸರು ತಿಳಿದಿರುವುದಿಲ್ಲ, ಹೆಚ್ಚಿನ ಮಾಹಿತಿಗಾಗಿ ನಗರ ಠಾಣೆಯನ್ನು ಗಾಯಾಳು ಸಂಬಂಧಿಕರು ಸಂಪರ್ಕಿಸಬಹುದಾಗಿದೆ.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಸಿದೆ.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

8 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

9 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

21 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

24 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 day ago