Categories: ಕೋಲಾರ

ನಗರಸಭೆಯ ಅಭಿವೃದ್ಧಿಗೆ ಮಾಹಿತಿ ಕೊಡಿ, ಕೆಲಸ ಮಾಡಿಸುವ ಜವಾಬ್ದಾರಿ ನಮಗೆ ಬಿಡಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿನ ಸಮಸ್ಯೆಗಳಿಗೆ ಹಾಗೂ ಕಾಮಗಾರಿ ಬಗ್ಗೆ ಮಾಹಿತಿ ಕೊಡಿ ನಗರಸಭೆ ಕಮಿಷನರ್ ಕೈಯಲ್ಲಿ ಕೆಲಸ ಮಾಡಿಸುವ ಜವಾಬ್ದಾರಿ ನಮಗೆ ಬಿಡಿ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ನಗರಸಭೆ ಸದಸ್ಯರಿಗೆ ಹೇಳಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಗರಸಭೆಗೆ ಸಂಬಂಧಿಸಿದ ಕುಂದುಕೊರತೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರದೇ ಇಲಾಖೆ. ನಗರಸಭೆ ರಾಜ್ಯ ಸರಕಾರವು ಈಗಾಗಲೇ ಅನುದಾನವು ಬಿಡುಗಡೆ ಮಾಡಿದೆ. ಇನ್ನೂ ಬೇಕಾದರೂ ಹಣ ಕೊಡಲು ಸರಕಾರ ಸಿದ್ದವಿದೆ. ನಿಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಯಾವ ಕೆಲಸಗಳು ಆಗಬೇಕಾಗಿದೆ ಎಲ್ಲಿ ಆಗಬೇಕು ಎಂಬುದನ್ನು ಪಟ್ಟಿ ಮಾಡಿ ಕೂಡಲೇ ಕೆಲಸವನ್ನು ಮಾಡಿಸುತ್ತೇವೆ ಎಂದರು.

ನಗರಸಭೆ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ನೀರಿಗೆ ತೊಂದರೆಯಾಗದಂತೆ ಕೂಡಲೇ ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳ ಟಾಸ್ಕ್ ಫೋರ್ಸ್ ಲ್ಲಿ ಅನುದಾನ ಇದೆ. ನಗರಸಭೆ ಜನರ ಆಸ್ತಿಯಾಗಿದೆ ಜನ ದಿನನಿತ್ಯ ನಗರಸಭೆಗೆ ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಬರುತ್ತಾರೆ. ಅವರಿಗೆ ಪರಿಹಾರ ನೀಡುವುದು ಕೂಡ ಅಧಿಕಾರಿಗಳ ಜವಾಬ್ದಾರಿ. ನಗರಸಭೆಯಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಒಂದೊಂದಾಗಿ ಪರಿಹಾರಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು ಮಾತನಾಡಿ, ಅಧಿಕಾರಿಗಳಿಗೆ ನಾವು ಚುನಾವಣೆಯಲ್ಲಿ ಆಯ್ಕೆಯಾದ ನಗರಸಭೆ ಸದಸ್ಯರು ಎಂಬ ಕನಿಷ್ಠ ಗೌರವವಿಲ್ಲ ಸರಿಯಾದ ಮಾಹಿತಿ ಕೊಡಲ್ಲ ದಳ್ಳಾಳಿಗಳಿಗೆ ಇರುವ ಗೌರವ ನಮಗಿಲ್ಲ ವಿನಾಕಾರಣ ಸದಸ್ಯರ ಬಗ್ಗೆ ಆರೋಪಗಳನ್ನು ಮಾಡತ್ತಾರೆ. ಇವತ್ತು 35 ಜನ ನಗರಸಭೆ ಸದಸ್ಯರು ಇದ್ದಾರೆ ನೇರವಾಗಿ ಹೇಳಲಿ ಸದಸ್ಯರ ಮೇಲೆ ಗೂಬೆ ಕೂರಿಸುತ್ತಾರೆ ಹೊರತು ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಾ ಇಲ್ಲ. ಜನರಿಂದ ವೋಟ್ ಹಾಕಿಸಿಕೊಂಡ ತಪ್ಪಿಗೆ ಜನರು ನಮ್ಮನ್ನು ಕೆಟ್ಟದಾಗಿ ಬೈಕೊಂಡು ಹೋಗತ್ತಾರೆ ಎಂದು ಅಧಿಕಾರಿಗಳ ಕಾರ್ಯವೈಖರಿಯನ್ನು ಪಕ್ಷಾತೀತವಾಗಿ ಎಲ್ಲಾ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಶಾಸಕ ಕೊತ್ತೂರು ಮಂಜುನಾಥ್, ನಗರಸಭೆ ಸದಸ್ಯರನ್ನು ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎಂಬುದನ್ನು ಬಿಟ್ಟು ಅವರು ಕೇಳಿದಾಗ ಸ್ಪಂದಿಸುವುದು ಅಧಿಕಾರಿ ವರ್ಗದವರ ಜವಾಬ್ದಾರಿ ಹಿಂದೆ ಏನು ಆಗಿದೆ ಅದನ್ನು ಬಿಟ್ಟು ಬಿಡೋಣ ಮುಂದೆ ಆಗದಂತೆ ಎಚ್ಚರಿಕೆ ವಹಿಸೋಣ ನಗರಸಭೆಯನ್ನು ಮಂದೆ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲು ಸರಕಾರ ಕಾರ್ಯ ಯೋಜನೆ ರೂಪಿಸಲಾಗುತ್ತಾ ಇದೆ. ನೂತನ ಕಟ್ಟಡವನ್ನು ಪಾಲಿಕೆಗೆ ಪೂರಕವಾಗಿ ಆದಷ್ಟು ಬೇಗ ನಿರ್ಮಿಸಲಾಗುತ್ತದೆ. ನಿಮ್ಮಲ್ಲಿ ನಾಲ್ಕು ಜನರ ತಂಡ ಮಾಡಿ ಕಟ್ಟಡದ ಪ್ರತಿಯೊಂದು ಹಂತದಲ್ಲಿ ಪರಿಶೀಲನೆ ಮಾಡಿಸಲಾಗುತ್ತದೆ. ಕಟ್ಟಡವು ಗುಣಮಟ್ಟದೊಂದಿಗೆ ಮಾದರಿ ಕಟ್ಟಡ ನಿರ್ಮಿಸಲು ಎಲ್ಲರ ಸಹಕಾರ ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಭೆ ಇದೆ ಎಂದು ಗೊತ್ತಿದ್ದರೂ ನಗರಸಭೆ ವ್ಯಾಪ್ತಿಯ ಕೆಲವು ಗುತ್ತಿಗೆದಾರರು ಸಭೆಗೆ ಬಂದಿಲ್ಲ ಎಂದು ಆಯುಕ್ತರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಆಯುಕ್ತರು ತಮ್ಮ ವ್ಯಾಪ್ತಿಯ ಗುತ್ತಿಗೆದಾರರನ್ನು ಕರೆಸಿ ಸಭೆ ಮಾಡಿ ಅವರಿಗೆ ಕಾಮಗಾರಿಗಳ ಬಗ್ಗೆ ಗಡುವು ನೀಡಬೇಕು ಇಂತಿಷ್ಟು ದಿನಗಳಲ್ಲಿ ಮುಗಿಸಬೇಕು ಎಂದು ಹೇಳಿ ಜೊತೆಗೆ ನಗರಸಭೆಯಲ್ಲಿನ ದಳ್ಳಾಳಿಗಳನ್ನು ದೂರವಿಟ್ಟರೆ ಅರ್ಧದಷ್ಟು ಸಮಸ್ಯೆಗಳು ಪರಿಹಾರವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ನಗರಸಭೆಗೆ ಸಂಬಂಧಿಸಿದ ಯಾವುದೇ ಫೈಲ್‌ಗಳು ಬಂದರೂ ಕೂಡಲೇ ಪರಿಹಾರ ಮಾಡಿ ಕಳುಹಿಸಲಾಗುತ್ತಿದೆ. ಸಮಸ್ಯೆಗಳನ್ನು ಗಮನಕ್ಕೆ ತಂದರೆ ಪರಿಹಾರ ಮಾಡಲು ಕಚೇರಿಯ ಸಿಬ್ಬಂದಿ ಕೂಡ ಸಿದ್ದರಿದ್ದಾರೆ. ಬೇಸಿಗೆ ಪ್ರಾರಂಭವಾಗುತ್ತಾ ಇದೆ ನೀರಿಗೆ ಸಮಸ್ಯೆಯಾಗಬಾರದು ಕಸದ ನಿರ್ವಹಣೆಗೆ ತೊಂದರೆಯಾಗದ ರೀತಿಯಲ್ಲಿ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದರು

ಸಭೆಯಲ್ಲಿ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮೀ, ತಹಶಿಲ್ದಾರ್ ಹರ್ಷವರ್ಧನ್, ನಗರಸಭೆ ಆಯುಕ್ತ ಶಿವಾನಂದ್, ಯೋಜನಾ ನಿರ್ದೇಶಕಿ ಅಂಬಿಕಾ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

2 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

4 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

5 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

13 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

16 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

24 hours ago