ನಗರಸಭೆಯ ಮೈನಾರಿಟಿಯಲ್ಲಿನ 10 ಕೋಟಿ ಅನುದಾನದ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಭೂಮಿ ಪೂಜೆ

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾಗಿರುವ ಹತ್ತು ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಕೊತ್ತೂರು ಜಿ ಮಂಜುನಾಥ್ ಭೂಮಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಜನಕ್ಕೆ ಉಪಯೋಗವಾಗುವ ಕೆಲಸಕ್ಕೆ ಸದಾಕಾಲವೂ ಬೆಂಬಲವಾಗಿ ಇರಬೇಕು ಯಾರು ಕೂಡ ಸ್ವಂತಿಕೆಗೆ ಮಾಡುತಿಲ್ಲ ಸಾರ್ವಜನಿಕ ಉಪಯೋಗಕ್ಕೆ ಮಾಡಿದ್ದು ಸ್ಥಳೀಯರೇ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲನೆ ಮಾಡಬೇಕು ಮಳೆ ನೀರು ಚರಂಡಿ ಮೂಲಕ ಸರಾಗವಾಗಿ ಹರಿಯುವಂತೆ ಮುಂಚಿತವಾಗಿಯೇ ಮಾಡಬೇಕು ನಿರ್ಲಕ್ಷ್ಯ ವಹಿಸಬಾರದು ಆದಷ್ಟು ಬೇಗ ಕಾಮಗಾರಿಗಳಿಗೆ ಪ್ರಾರಂಭಿಸಿ ಗುಣಮಟ್ಟದಿಂದ ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು

ನಗರಸಭೆಯ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ
ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಸಚಿವ ಜಮೀರ್ ಅಹಮ್ಮದ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಮುತುವರ್ಜಿಯಿಂದ 10 ಕೋಟಿ ರೂ. ಅನುದಾನ ಬಿಡುಗೆಯಾಗಿದೆ ಅನುದಾನ ಅವಶ್ಯಕತೆ ಇದ್ದಲ್ಲಿ ಇನ್ನೂ ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದು ಅಭಿವೃದ್ಧಿ ನಮ್ಮ ಗುರಿಯಾಗಿದೆ ನಾವು ಯಾವುದೇ ಕಮಿಷನ್ ಪಡೆಯಲ್ಲ ನೀವು ಅಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಆಯುಕ್ತ ಪ್ರಸಾದ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್, ಕೋಮುಲ್ ನಿರ್ದೇಶಕ ಷಂಷೀರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ನಗರಸಭೆ ಸದಸ್ಯರಾದ ಸೈಯದ್ ಹಿದಾಯಿತ್, ಮುರಳಿಗೌಡ, ಗುಣಶೇಖರ್, ಖಮರ್, ತಾಲೂಕು ವೈದ್ಯಾಧಿಕಾರಿ ನಾರಾಯಣಸ್ವಾಮಿ, ಮುಖಂಡರಾದ ಖಯ್ಯಾಮ್, ಮೈಲಾಂಡಹಳ್ಳಿ ಮುರಳಿ, ಮುಂತಾದವರು ಇದ್ದರು.

Leave a Reply

Your email address will not be published. Required fields are marked *