ದೊಡ್ಡಬಳ್ಳಾಪುರ: ನಗರದ 5ನೇ ವಾರ್ಡ್ ನಿವಾಸಿ ಯಶೋಧಮ್ಮ ಪರವಾಗಿ ಕೋರ್ಟ್ ಆದೇಶವಿದ್ದರೂ ನಗರಸಭೆ ಸದಸ್ಯೆಯೊಬ್ಬರ ಸಹೋದರ ರಘು ಎಂಬಾತ ಅಮಾಯಕ ಮಹಿಳೆಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ, ಮಕ್ಕಳು ಮತ್ತು ವಯೋವೃದ್ದರ ಹಿತರಕ್ಷಣಾ ಸಮಿತಿ ಅಧ್ಯಕ್ಷೆ ಭಾಗ್ಯಮ್ಮ ಆರೋಪಿಸಿದರು.
ನಗರದ 4ನೇ ವಾರ್ಡಿನಲ್ಲಿರುವ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಗರಸಭೆ ಅಧಿಕಾರಿಗಳ ಕಾನೂನು ಬಡವರಿಗೊಂದು, ಉಳ್ಳವರಿಗೊಂದು ಇದೆಯಾ ಎಂದು ಪ್ರಶ್ನಿಸಿದರು.
ಮನೆ ನಿರ್ಮಿಸಿಕೊಳ್ಳಲು ನ್ಯಾಯಾಲಯ ಆದೇಶ ನೀಡಿದೆ. ಆದರೂ ಆದರೂ ಉದ್ದೇಶ ಪೂರ್ವಕವಾಗಿ ಬಡಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದರು.
ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರವಾನಗಿ ಪಡೆದು ಮನೆ ಕಟ್ಟಿಕೊಳ್ಳಲು ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ಅವಾಸ್ ಯೋಜನೆಯಲ್ಲಿ ಈಗಾಗಲೇ ಸಾಲ ಸಹ ಮಂಜೂರಾಗಿದೆ. ನಮ್ಮ ಜಾಗದಲ್ಲಿ ನಾವು ಮನೆ ಕಟ್ಟಿಕೊಳ್ಳಲು ಅಡ್ಡಿಪಡಿಸುತ್ತಿರುವ ರಘು ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳ ನಡೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಜರುಗಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನೊಂದ ಮಹಿಳೆ ಯಶೋದಮ್ಮ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…