ನಗರಸಭೆ ಪಾರ್ಕಿನಲ್ಲಿ ‌ಮತ್ತೆ ಕಿಡಿಗೇಡಿಗಳ ಅಟ್ಟಹಾಸ: ಸುಮಾರು 12ಕ್ಕೂ ಹೆಚ್ಚು ಪಾರ್ಕ್ ಬೆಂಚುಗಳ ಧ್ವಂಸ

ಕುಳಿತುಕೊಳ್ಳುವ ಪಾರ್ಕ್ ಬೆಂಚುಗಳನ್ನು ಕಿಡಿಗೇಡಿಗಳು ಹೊಡೆದುರುಳಿಸಿರುವ ಘಟನೆ ಕಳೆದ ರಾತ್ರಿ ನಗರಸಭೆ ಪಾರ್ಕಿನಲ್ಲಿ (ಮೈ.ತಿ.ಶ್ರೀಕಂಠಯ್ಯ ಉದ್ಯಾನವನ) ನಡೆದಿದೆ.

ಇತ್ತೀಚೆಗೆ ಉದ್ಯಾನದ ಮಧ್ಯಭಾಗದಲ್ಲಿರುವ ಕಾಟೇಜ್ ಮಾದರಿಯ ತಂಗುದಾಣದಲ್ಲಿ ವಾಯು ವಿಹಾರಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಕಡಪಾ ಕಲ್ಲಿನ ಬೆಂಚುಗಳನ್ನು ನಿರ್ಮಿಸಲಾಗಿತ್ತು. ಅವುಗಳನ್ನು ಸಹ  ಕಲ್ಲಿನಿಂದ ಜಜ್ಜಿ ಧ್ವಂಸ ಮಾಡಿದ್ದರು. ಇದೀಗ ಮತ್ತೆ ಈ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ.

12ಕ್ಕೂ ಹೆಚ್ಚು ಪಾರ್ಕ್ ಬೆಂಚುಗಳನ್ನ ಹೊಡೆದುರುಳಿಸಿದ್ದಾರೆ. ಈ ಕುರಿತು ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ನುಣುಚಿಕೊಂಡಿದ್ದಾರೆ. ಉದ್ಯಾನವನದಲ್ಲಿ ಸಿಸಿಟಿವಿ ಸೇರಿದಂತೆ ಯಾವುದೇ ಸುರಕ್ಷತಾ ಕ್ರಮಗಳ ಇಲ್ಲದೇ ಇರುವುದು ಎದ್ದು ಕಾಣುತ್ತಿದೆ.

ಅಕ್ಷಮ್ಯ ಕೃತ್ಯದ ಹಿಂದೆ ಯಾರೇ ಇದ್ದರೂ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಗೂಂಡಾ ಕಾಯ್ದೆ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

7 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

9 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

10 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

14 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

15 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

15 hours ago