ನಗರಸಭೆ ಸದಸ್ಯ ಭಾಸ್ಕರ್(55) ವಿಧಿವಶ

ದೊಡ್ಡಬಳ್ಳಾಪುರ ನಗರದ ಹೇಮಾವತಿಪೇಟೆಯ ನಗರಸಭಾ ಸದಸ್ಯ ಭಾಸ್ಕರ್ (55) ಅನಾರೋಗ್ಯದ ಕಾರಣ ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.

ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಭಾಸ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು (ಸೋಮವಾರ) ಮುಂಜಾನೆ ಮೃತಪಟ್ಟಿದ್ದಾರೆ.

ಮೃತರು ಮಡದಿ ಮತ್ತು ಮಗನನ್ನು ಅಗಲಿದ್ದಾರೆ.

ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆ 9 ಗಂಟೆ ಬಳಿಕ ಹೇಮಾವತಿ ಪೇಟೆಯ ಸ್ವಗೃಹದ ಬಳಿ ಅವಕಾಶ ಕಲ್ಪಿಸಲಾಗುತ್ತಿದೆ.

ಅಂತ್ಯಕ್ರಿಯೆ ಮುಕ್ತಿಧಾಮದಲ್ಲಿ ನಡೆಯಲಿದ್ದು, ಸಮಯ ನಿಗದಿಯಾಗಿಲ್ಲವೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕರ್ನಾಟಕ ಛಾಯಾಗ್ರಾಹಕರ ಸಂಘದ ಮಾಜಿ ನಿರ್ದೇಶಕರಾಗಿ, ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಭಾಸ್ಕರ್ ಅವರು ನಗರಸಭೆಗೆ ಎರಡನೇ ಭಾರಿಗೆ ಸದಸ್ಯರಾಗಿ ಆಯ್ಕೆಯಾಗಿದ್ದರು.

ಭಾಸ್ಕ‌ರ್ ಅಗಲಿಕೆಗೆ ಶಾಸಕ ಧೀರಜ್ ಮುನಿರಾಜ್, ನಗರಸಭಾ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು, ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಸದಸ್ಯರು ಶ್ರದ್ಧಾಂಜಲಿ ಕೋರಿದ್ದಾರೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

10 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

14 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

17 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

19 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago