Categories: ಕೋಲಾರ

ನಗರೋತ್ಥಾನ ಕಾಮಗಾರಿಗಳ ಪೂರ್ಣಕ್ಕೆ ಮೂರು ತಿಂಗಳ ಗಡುವು ನೀಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ನಗರೋತ್ಥಾನ ಯೋಜನೆಯ ಮೂಲಕ ಹಮ್ಮಿಕೊಂಡಿರುವ ಕಾಮಗಾರಿಗಳನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ನೀವೇ ಹೇಳಿದ ಸಮಯಕ್ಕೆ ಪೂರ್ಣವಾಗಿಲ್ಲದೇ ಹೋದರೆ ಪರಿಣಾಮ ಬೇರೆ ರೀತಿಯಲ್ಲಿ ಇರುತ್ತದೆ ಎಂದು ಗುತ್ತಿಗೆದಾರನಿಗೆ ಶಾಸಕ ಕೊತ್ತೂರು ಜಿ ಮಂಜುನಾಥ್ ಗಡುವು ನೀಡಿದರು.

ಸೋಮವಾರ ನಗರಸಭೆಯ ಸಭಾಂಗಣದಲ್ಲಿ ನಗರಸಭೆಗೆ ಸಂಬಂಧಿಸಿದ ಕುಂದುಕೊರತೆಗಳ ಹಾಗೂ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಭಿವೃದ್ಧಿಗೆ ಹಣದ ಕೊರತೆಯಿಲ್ಲ ಕಾಮಗಾರಿಗಳು ಆಗದೆ ಸಮಸ್ಯೆ ತಂದಾಗ ಅಭಿವೃದ್ಧಿ ಹೇಗೆ ಸಾಧ್ಯ ನಗರಸಭೆ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳು ಪ್ರತಿನಿತ್ಯ ಕಾಮಗಾರಿಗಳ ಜೊತೆಗೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ಮಾಡಬೇಕು ಕೇವಲ ಕಛೇರಿಗೆ ಮಾತ್ರ ಸೀಮಿತವಾಗಬಾರದು ಗುತ್ತಿಗೆದಾರನಿಗೆ ವಹಿಸಿದ್ದೇವೆ ಅವರೇ ನೋಡಿಕೊಳ್ಳತ್ತಾರೆ ಅಂತ ಕೂತರೆ ಜನರಿಂದ ವೋಟ್ ಹಾಕಿಸಿಕೊಂಡ ತಪ್ಪಿಗೆ ಜನಪ್ರತಿನಿಧಿಗಳನ್ನು ಬೈದುಕೊಂಡು ಹೋಗತ್ತಾರೆ ಜನರಿಗೋಸ್ಕರ ಇದ್ದೇವೆ ಎಂಬುದನ್ನು ಅರ್ಥಮಾಡಿಕೊಂಡು ಹೋಗಿ ಕೆಲಸ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಾವು ಎಲ್ಲರೂ ನಗರದ ಅಭಿವೃದ್ಧಿಗೆ ಮೊದಲ ಅಧ್ಯತೆ ನೀಡಬೇಕು ಇದಕ್ಕೆ ಗುತ್ತಿಗೆದಾರರು ಸಂಬಂಧಿಸಿದ ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಪ್ರತಿಯೊಬ್ಬರ ಅಭಿಪ್ರಾಯವನ್ನು ಪಡೆಯಬೇಕು ನಗರಸಭೆ ವ್ಯಾಪ್ತಿಯಲ್ಲಿ ಗುತ್ತಿಗೆದಾರರು ಒಂದು ಕಾಮಗಾರಿ ಪೂರ್ಣಗೊಂಡ ನಂತರ ಮತ್ತೊಂದು ಕಾಮಗಾರಿ ಪ್ರಾರಂಭ ಮಾಡಬೇಕು ಅದು ಬಿಟ್ಟು ಪ್ರಾರಂಭ ಮಾಡಿ ಮಧ್ಯದಲ್ಲೇ ಬಿಟ್ಟರೆ ಸುಮ್ಮನೆ ಬಿಡಲ್ಲ ಎಲ್ಲಾ ಕಾಮಗಾರಿಗಳನ್ನು ಮಾಡಕ್ಕೆ ಹೋಗಿ ಸಾರ್ವಜನಿಕರ ಗುರಿಗೆ ತುತ್ತಾಗಬೇಡಿ ಅನುದಾನಕ್ಕೆ ಕೊರತೆಯಿಲ್ಲ ಆದರೆ ಕಾಮಗಾರಿಗಳು ಪೂರ್ಣಗೊಳ್ಳದೇ ಅನುದಾನ ಕೊಡಲು ಸಾಧ್ಯವಿಲ್ಲ ಎಂದರು.

ಅಧಿಕಾರಿಗಳಿಗೆ ಇಂತಿಷ್ಟು ಅಂತ ಕೆಲಸದ ಸಮಯವಿದೆ ಆದರೆ ಜನಪ್ರತಿನಿಧಿಗಳಿಗೆ ದಿನದ 24 ಗಂಟೆಯೂ ಕೂಡ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ ರಾತ್ರಿ ಮಲಗಿದ್ದರೂ ಜನ ಬಿಡಲ್ಲ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಇಚ್ಛಾಶಕ್ತಿ ಇಲ್ಲದೇ ಹೋದರೆ ವರ್ಗಾವಣೆ ಮಾಡಿಕೊಂಡು ಹೋಗಿ ನಿಮ್ಮ ಜಾಗಕ್ಕೆ ಕೆಲಸ ಮಾಡೋರನ್ನು ಕರೆಸಿಕೊಳ್ಳುವುದು ನಮಗೆ ಗೊತ್ತಿದೆ ನಗರದಾದ್ಯಂತ ಬೀದಿದ್ವೀಪಗಳಿಗೆ ಸಂಬಂಧಿಸಿದಂತೆ ಸರ್ವೆ ಮಾಡಿಸಿ ಎಷ್ಟು ಅವಶ್ಯಕತೆ ಇದೆ ಕೂಡಲೇ ಗಮನಕ್ಕೆ ತನ್ನಿ ಜೊತೆಗೆ ಪ್ರತಿ ತಿಂಗಳು ಸಮಸ್ಯೆಗಳಿಗೆ ಸಂಬಂಧಿಸಿದಂತೆಯೇ ಕೊನೆಯ ವಾರ ಸಭೆ ನಡೆಯಲಿದ್ದು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಸದಸ್ಯ ಪ್ರಸಾದ್ ಬಾಬು ಮಾತನಾಡಿ, ಗುತ್ತಿಗೆದಾರನಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದೇ ವಿನಾಕಾರಣ ನಗರಸಭೆ ಸದಸ್ಯರ ಮೇಲೆ ಸುಳ್ಳು ಆರೋಪಗಳನ್ನು ಮಾಡಲು ಹೊರಟಿದ್ದಾರೆ ಪ್ರಶ್ನೆ ಮಾಡಿದರೆ ನಾವು ಲೋಕಲ್ ಅಂತಾರೆ ಲೋಕಲ್ ಆದರೆ ರಾಜಕೀಯ ಮಾಡಲಿ ಟೆಂಡರ್ ಯಾಕೆ ಬೇಕು ಇವರನ್ನು ಮೊದಲು ಬ್ಲಾಕ್ ಲಿಸ್ಟ್ ಗೆ ಹಾಕಲಿ ಉಳಿದವರಿಗೂ ಇದು ಪಾಠವಾಗುತ್ತದೆ ನಗರೋತ್ಥಾನ ಯೋಜನೆಯಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ಪರಿಶೀಲನೆಯಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸದಸ್ಯರಾದ ರಾಕೇಶ್, ಸೂರಿ, ಮುರಳಿಗೌಡ ಮಾತನಾಡಿ ನಗರಸಭೆ ಅಧಿಕಾರಿಗಳಿಗೆ ನಾವು ಜನರಿಂದ ಆಯ್ಕೆಯಾದ ಸದಸ್ಯರು ಅಂತ ಪರಿಗಣಿಸುತ್ತಾ ಇಲ್ಲ ಕನಿಷ್ಠ ಸಮಸ್ಯೆ ಹೇಳಿದಾಗ ಪರಿಹಾರಕ್ಕೆ ಸಹ ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ನಗರೋತ್ಥಾನ, ಯರಗೋಳು ಕಾಮಗಾರಿಗಳಿಗೆ ವೇಗ ನೀಡಬೇಕು, ಕಾಮಗಾರಿ ಗುಣಮಟ್ಟವನ್ನು ಕಾಪಾಡಬೇಕು, ಕ್ಯೂರಿಂಗ್ ಸರಿಯಾಗಿ ಆಗಬೇಕು,ಯುಜಿಡಿಯ ಅನಾವಶ್ಯಕವಾಗಿ ತೋಡಿದ ಗುಂಡಿಗಳನ್ನು ಕೂಡಲೇ ಮುಚ್ಚಬೇಕು ಒತ್ತಾಯಿಸಿದರು.

ಸಭೆಯಲ್ಲಿ ನಗರಸಭೆ ಆಯುಕ್ತ ಶಿವಾನಂದ್, ಯೋಜನಾ ನಿರ್ದೇಶಕಿ ಅಂಬಿಕಾ, ಇಂಜಿನಿಯರ್ ಶ್ರೀನಿವಾಸ್, ಸೇರಿದಂತೆ ಗುತ್ತಿಗೆದಾರರು ನಗರಸಭೆ ಸದಸ್ಯರು ಇದ್ದರು

Ramesh Babu

Journalist

Recent Posts

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

1 hour ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

2 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

14 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

16 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

16 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

1 day ago