ಕೋಲಾರ: ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ನಗರೋತ್ಥಾನ ಯೋಜನೆಯ ಮೂಲಕ ಹಮ್ಮಿಕೊಂಡಿರುವ ಕಾಮಗಾರಿಗಳನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ನೀವೇ ಹೇಳಿದ ಸಮಯಕ್ಕೆ ಪೂರ್ಣವಾಗಿಲ್ಲದೇ ಹೋದರೆ ಪರಿಣಾಮ ಬೇರೆ ರೀತಿಯಲ್ಲಿ ಇರುತ್ತದೆ ಎಂದು ಗುತ್ತಿಗೆದಾರನಿಗೆ ಶಾಸಕ ಕೊತ್ತೂರು ಜಿ ಮಂಜುನಾಥ್ ಗಡುವು ನೀಡಿದರು.
ಸೋಮವಾರ ನಗರಸಭೆಯ ಸಭಾಂಗಣದಲ್ಲಿ ನಗರಸಭೆಗೆ ಸಂಬಂಧಿಸಿದ ಕುಂದುಕೊರತೆಗಳ ಹಾಗೂ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಭಿವೃದ್ಧಿಗೆ ಹಣದ ಕೊರತೆಯಿಲ್ಲ ಕಾಮಗಾರಿಗಳು ಆಗದೆ ಸಮಸ್ಯೆ ತಂದಾಗ ಅಭಿವೃದ್ಧಿ ಹೇಗೆ ಸಾಧ್ಯ ನಗರಸಭೆ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳು ಪ್ರತಿನಿತ್ಯ ಕಾಮಗಾರಿಗಳ ಜೊತೆಗೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ಮಾಡಬೇಕು ಕೇವಲ ಕಛೇರಿಗೆ ಮಾತ್ರ ಸೀಮಿತವಾಗಬಾರದು ಗುತ್ತಿಗೆದಾರನಿಗೆ ವಹಿಸಿದ್ದೇವೆ ಅವರೇ ನೋಡಿಕೊಳ್ಳತ್ತಾರೆ ಅಂತ ಕೂತರೆ ಜನರಿಂದ ವೋಟ್ ಹಾಕಿಸಿಕೊಂಡ ತಪ್ಪಿಗೆ ಜನಪ್ರತಿನಿಧಿಗಳನ್ನು ಬೈದುಕೊಂಡು ಹೋಗತ್ತಾರೆ ಜನರಿಗೋಸ್ಕರ ಇದ್ದೇವೆ ಎಂಬುದನ್ನು ಅರ್ಥಮಾಡಿಕೊಂಡು ಹೋಗಿ ಕೆಲಸ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅಧಿಕಾರಿಗಳಿಗೆ ಇಂತಿಷ್ಟು ಅಂತ ಕೆಲಸದ ಸಮಯವಿದೆ ಆದರೆ ಜನಪ್ರತಿನಿಧಿಗಳಿಗೆ ದಿನದ 24 ಗಂಟೆಯೂ ಕೂಡ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ ರಾತ್ರಿ ಮಲಗಿದ್ದರೂ ಜನ ಬಿಡಲ್ಲ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಇಚ್ಛಾಶಕ್ತಿ ಇಲ್ಲದೇ ಹೋದರೆ ವರ್ಗಾವಣೆ ಮಾಡಿಕೊಂಡು ಹೋಗಿ ನಿಮ್ಮ ಜಾಗಕ್ಕೆ ಕೆಲಸ ಮಾಡೋರನ್ನು ಕರೆಸಿಕೊಳ್ಳುವುದು ನಮಗೆ ಗೊತ್ತಿದೆ ನಗರದಾದ್ಯಂತ ಬೀದಿದ್ವೀಪಗಳಿಗೆ ಸಂಬಂಧಿಸಿದಂತೆ ಸರ್ವೆ ಮಾಡಿಸಿ ಎಷ್ಟು ಅವಶ್ಯಕತೆ ಇದೆ ಕೂಡಲೇ ಗಮನಕ್ಕೆ ತನ್ನಿ ಜೊತೆಗೆ ಪ್ರತಿ ತಿಂಗಳು ಸಮಸ್ಯೆಗಳಿಗೆ ಸಂಬಂಧಿಸಿದಂತೆಯೇ ಕೊನೆಯ ವಾರ ಸಭೆ ನಡೆಯಲಿದ್ದು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸದಸ್ಯರಾದ ರಾಕೇಶ್, ಸೂರಿ, ಮುರಳಿಗೌಡ ಮಾತನಾಡಿ ನಗರಸಭೆ ಅಧಿಕಾರಿಗಳಿಗೆ ನಾವು ಜನರಿಂದ ಆಯ್ಕೆಯಾದ ಸದಸ್ಯರು ಅಂತ ಪರಿಗಣಿಸುತ್ತಾ ಇಲ್ಲ ಕನಿಷ್ಠ ಸಮಸ್ಯೆ ಹೇಳಿದಾಗ ಪರಿಹಾರಕ್ಕೆ ಸಹ ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ನಗರೋತ್ಥಾನ, ಯರಗೋಳು ಕಾಮಗಾರಿಗಳಿಗೆ ವೇಗ ನೀಡಬೇಕು, ಕಾಮಗಾರಿ ಗುಣಮಟ್ಟವನ್ನು ಕಾಪಾಡಬೇಕು, ಕ್ಯೂರಿಂಗ್ ಸರಿಯಾಗಿ ಆಗಬೇಕು,ಯುಜಿಡಿಯ ಅನಾವಶ್ಯಕವಾಗಿ ತೋಡಿದ ಗುಂಡಿಗಳನ್ನು ಕೂಡಲೇ ಮುಚ್ಚಬೇಕು ಒತ್ತಾಯಿಸಿದರು.
ಸಭೆಯಲ್ಲಿ ನಗರಸಭೆ ಆಯುಕ್ತ ಶಿವಾನಂದ್, ಯೋಜನಾ ನಿರ್ದೇಶಕಿ ಅಂಬಿಕಾ, ಇಂಜಿನಿಯರ್ ಶ್ರೀನಿವಾಸ್, ಸೇರಿದಂತೆ ಗುತ್ತಿಗೆದಾರರು ನಗರಸಭೆ ಸದಸ್ಯರು ಇದ್ದರು
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…