ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ನಗರದ ವಿವಿಧ ಕಡೆಗಳಲ್ಲಿ ಮೊಬೈಲ್ ಕಳೆದುಕೊಂಡವರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ದಾಖಲಾದ ಹಿನ್ನೆಲೆ ಮೊಬೈಲ್ ಕಳ್ಳರ ಜಾಡು ಹಿಡಿದ ಪೊಲೀಸರು ಮೊಬೈಲ್ ಕಳ್ಳರನ್ನು ಹಿಡಿದು ಕಳುವಾಗಿದ್ದ ಮೊಬೈಲ್ ಫೋನ್ ಗಳನ್ನು ಪತ್ತೆಹಚ್ಚಿ ಇಂದು ನಗರ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಮ್ ಶ್ರೇಯಕರ ಅವರು 8 ಮಂದಿ ಮೊಬೈಲ್ ಕಳೆದುಕೊಂಡು ದೂರು ನೀಡಿದ್ದ ದೂರುದಾರರಿಗೆ ಮೊಬೈಲ್ ಫೋನ್ ಗಳನ್ನು ವಾಪಾಸ್ ನೀಡಿದರು.
ಪೊಲೀಸರ ಕಾರ್ಯ ವೈಖರಿ ಬಗ್ಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.