ನಗರ ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಹಾಗೂ ಸಂಚಾರಿ ನಿಯಮಗಳ ಕುರಿತು ಅಭಿಯಾನ

ನಗರ ಪೊಲೀಸ್ ಠಾಣೆ ವತಿಯಿಂದ ಭಾನುವಾರ ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಹೆಲ್ಮೆಟ್ ಜಾಗೃತಿ ಹಾಗೂ ಸಂಚಾರಿ ನಿಯಮಗಳ ಕುರಿತು ಅಭಿಯಾನ ನಡೆಸಲಾಯಿತು.

ನಗರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಎ.ಅಮರೇಶಗೌಡ, ಪಿಎಸ್ಐ ಎಂ.ಕೃಷ್ಣಪ್ಪ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಶಿರಸ್ತ್ರಾಣ(ಹೆಲ್ಮೆಟ್) ಧರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿ ಎಂಬ ಭಿತ್ತಿಪತ್ರಗಳನ್ನು ಹಿಡಿದು ನಗರ ಪೊಲೀಸ್ ಠಾಣೆಯಿಂದ ಹಿಡಿದು ಡಿ ಕ್ರಾಸ್, ಹಳೆ ಬಸ್ ನಿಲ್ದಾಣ, ಮುಗವಾಳಪ್ಪ ವೃತ್ತ, ಇಸ್ಲಾಂಪುರ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಜಾಲಪ್ಪ ಕಾಲೇಜು ರಸ್ತೆ, ತಾಲೂಕು ಕಚೇರಿ ವೃತ್ತ, ಬಸವ ಭವನ ವೃತ್ತದ ಮೂಲಕ ಸಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ಹಾಗೂ ಸಂಚಾರಿ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸುವಂತೆ  ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ನಗರದಲ್ಲಿ ವಾಹನ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದೆ. ಹೆಲ್ಮೆಟ್ ಧರಿಸದ ಕಾರಣ ಹಲವರು ಬೈಕ್ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡುವುದರಿಂದ ಜೀವ ಉಳಿಸಿಕೊಳ್ಳಬಹುದು. ಹಾಗಾಗಿ ಎಲ್ಲರೂ ಹೆಲ್ಮೆಟ್ ಧರಿಸಬೇಕು ಎಂದು ಕೋರಿದರು.

ಚಿಕ್ಕಬಳ್ಳಾಪುರ ಜಿಲ್ಲೆ ನಂದಿ ಗ್ರಾಮದ ಸಮಾಜ‌ ಸೇವಕ ಅಶೋಕ್ ಅವರು ಹೆಲ್ಮೆಟ್ ಕೊಡುಗೆ ನೀಡಿದ್ದಾರೆ.

Leave a Reply

Your email address will not be published. Required fields are marked *