ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಡಾ.ರಾಜ್ ಕುಮಾರ್ ಜನ್ಮದಿನದ ಪ್ರಯುಕ್ತ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಕಮ್ಮನಹಳ್ಳಿಯಲ್ಲಿ ನವೀಕರಣಗೊಂಡ ಡಾ.ರಾಜ್‌ಕುಮಾರ್ ಉದ್ಯಾನವನ್ನು ಉದ್ಘಾಟಿಸಿ, ನೂತನವಾಗಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಸಚಿವರು ಮಾತನಾಡಿದರು.
“ನಮ್ಮ ಕ್ಷೇತ್ರದಲ್ಲಿ ಡಾ.ರಾಜ್‌ಕುಮಾರ್ ಹೆಸರಿನಲ್ಲಿ ಉದ್ಯಾನ ನಿರ್ಮಿಸಿ, ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಈಗ ಹೊಸದಾಗಿ ನಿರ್ಮಿಸಿರುವ ಬಯಲು ರಂಗಮಂದಿರವು ಸಾಮುದಾಯದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ವೇದಿಕೆಯಾಗಲಿದೆ. ಕ್ಷೇತ್ರದ ಇತರ ಉದ್ಯಾನಗಳನ್ನೂ ನವೀಕರಿಸಿ ಮತ್ತಷ್ಟು ಸುಂದರಗೊಳಿಸಲಾಗುವುದು,” ಎಂದರು.
ಉದ್ಯಾನದಲ್ಲಿ ಒಂದು ಸುತ್ತು ಹಾಕಿದ ಸಚಿವರು, ಶುಚಿತ್ವ, ಉದ್ಯಾನ ಬಳಕೆದಾರರಿಗೆ ಒದಗಿಸಿರುವ ಸೌಕರ್ಯಗಳನ್ನು ಪರಿಶೀಲಿಸದರಲ್ಲದೆ, ವಿಕಲಚೇತನರಿಗೆ ವ್ಹೀಲ್‌ಚೇರ್ ಹಾಗೂ ಕ್ರೀಡಾಪಟುಗಳಿಗೆ ಕ್ರೀಡಾಸಾಮಾಗ್ರಿಗಳನ್ನು ವಿತರಿಸಿದರು.
ಹೆಣ್ಣೂರು ಜೀವವೈವಿದ್ಯ ಉದ್ಯಾನಕ್ಕೂ ಭೇಟಿ ನೀಡಿದ ಸಚಿವ ಕೆ.ಜೆ. ಜಾರ್ಜ್, ಸುಸ್ಥಿರ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಹಸಿರು ಹೊದಿಕೆ ಹೆಚ್ಚಿಸಲು ಸೂಕ್ತ ಹನಿ ನೀರಾವರಿ ವ್ಯವಸ್ಥೆ ಮಾಡಲು ವಲಯ ಅರಣ್ಯ ಅಧಿಕಾರಿ ಹಾಗೂ ಉಪ ಅರಣ್ಯಸಂರಕ್ಷಣಾಧಿಕಾರಿಗೆ ಸೂಚಿಸಿದರು. ಧೀಮಂತ ನಾಯಕ ಬಿ.ಬಸವಲಿಂಗಪ್ಪನವರ ಹೆಸರಿನಲ್ಲಿ ಉದ್ಯಾನ ಅಭಿವೃದ್ದಿ ಮಾಡಲಾಗುತ್ತಿದೆ. ಅವರ ಹೆಸರಿನ ನಾಮಫಲಕ ಹಾಕುವಂತೆಯೂ ಸಲಹೆ ನೀಡಿದರು.
ಗುಣಮಟ್ಟದ ಕಾಮಗಾರಿಗೆ ಸೂಚನೆ
ಉದ್ಯಾನಗಳ ಅಭಿವೃದ್ದಿಯಲ್ಲದೆ ಬಡಾವಣೆಗಳಲ್ಲಿ ರಸ್ತೆ, ಬೀದಿ ದೀಪ, ಚರಂಡಿ ಹಾಗೂ ಕುಡಿಯುವ ನೀರು ಯೋಜನೆಗಳಿಗೆ ಕಮ್ಮನಹಳ್ಳಿ, ಹೆಚ್‌ಬಿಆರ್ ಬಡಾವಣೆ, ಕಾಡುಗೊಂಡನಹಳ್ಳಿಯ ಪಿಳ್ಳಣ್ಣ ಗಾರ್ಡನ್, ವಿನೋಭ ನಗರ, ನಾಗವಾರದ ಉಮದ್ ನಗರ, ರಶದ್ ನಗರ ಹಾಗೂ ಹೆಣ್ಣೂರಿನ ವೀರಣ್ಣಪಾಳ್ಯ ಮತ್ತು ಬಸಪ್ಪ ಬಡಾವಣೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ಕುರಿತು ಮುಖಂಡರು ಮತ್ತು ಗುತ್ತಿಗೆದಾರರ ಜತೆಗೆ ಮಾತನಾಡಿದ ಸಚಿವರು, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕು. ನಿಗದಿತ ಸಮಯದೊಳಗೆ ಕೆಲಸ ಪೂರ್ಣಗೊಳಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ವಿವಿದ ಬಡಾವಣೆಗಳಲ್ಲಿ ಕುಡಿಯುವ ನೀರಿನ ಬಗ್ಗೆ ಪ್ರಶ್ನಿಸಿದ ಜನರಿಗೆ ಸಮಾಧಾನದಿಂದಲೇ ಉತ್ತರಿಸಿದ ಸಚಿವರು, ಕೈಗೊಂಡಿರುವ ಯೋಜನೆಗಳು ಮತ್ತು ಅನುಕೂಲತೆಗಳನ್ನು ವಿವರಿಸಿದರು. ಸದ್ಯಕ್ಕೆ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುವುದು ಎಂದರು.
ಸಚಿವರೊಂದಿಗೆ ಮೋಹನ್ ಮೆನನ್, ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ. ಪುಲಕೇಶಿ, ಚಲುವೇಗೌಡ, ಕಲ್ಯಾಣ ನಗರ ವಾರ್ಡ್ ಅಧ್ಯಕ್ಷೆ ಪ್ರೇಮಾವತಿ, ಬಾಬು, ಕೆ.ಜೆ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರ ಮುನಿರಾಜು, ಹೆಚ್‌ಬಿಆರ್ ವಾರ್ಡ್ ಮುಖಂಡರಾದ ಸಯ್ಯದ್ ಕಲೀಂ, ಅಕ್ರಂ ಹಾಗೂ ಬೆಸ್ಕಾಂ, ಜಿಬಿಎ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…