ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ

ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್‌‍.ಡಿ.ಎಲ್‌) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ಅವರು ಇಂದಿನಿಂದ ವಿದ್ಯುಕ್ತ ರಾಯಭಾರಿಯಾಗಿದ್ದಾರೆ.

ಕೆ.ಎಸ್‌‍.ಡಿ.ಎಲ್‌ನ ವಹಿವಾಟನ್ನು 2030ರ ಹೊತ್ತಿಗೆ 5,000 ಕೋಟಿ ರೂ.ಗಳ ಮಟ್ಟಕ್ಕೆ ಬೆಳೆಸುವ ಗುರಿ ಹೊಂದಲಾಗಿದೆ. ಉತ್ತರ ಭಾರತ, ಅಮೇರಿಕ, ಮಧ್ಯಪ್ರಾಚ್ಯಗಳಲ್ಲೂ ಮೈಸೂರು ಸ್ಯಾಂಡಲ್‌ ಸೋಪ್‌ ಸಹಿತ ಸಂಸ್ಥೆಯ ಉತ್ಪನ್ನಗಳನ್ನು ಮಾರುಕಟ್ಟೆಯ ಅವಕಾಶ ಸೃಷ್ಟಿಸಿಕೊಳ್ಳುವ ಉದ್ದೇಶವಿದ್ದು, ಸೋಷಿಯಲ್‌ ಮೀಡಿಯಾದಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ತಮನ್ನಾ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆಗಳು, ಮೂಲಸೌಕರ್ಯ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಸಂಸ್ಥೆಯಲ್ಲಿ 50ಕ್ಕೂ ಹೆಚ್ಚು ಉತ್ಕೃಷ್ಟ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಪ್ರಚಾರ ರಾಯಭಾರಿಯಾಗಿರುವ ತಮನ್ನಾ ಅವರು ಉತ್ಪನ್ನಗಳ ಪ್ರಸಾರ ಜಾಹೀರಾತು, ಕಾರ್ಯಕ್ರಮಗಲ್ಲಿ ಮುಂದಿನ 2 ವರ್ಷಗಳ ಕಾಲ ಕಾಣಿಸಿಕೊಳ್ಳಲಿದ್ದಾರೆ ಎಂದರು.

ಕೆ.ಎಸ್‌‍.ಡಿ.ಎಲ್‌ನ ಸ್ಯಾಂಡಲ್‌ ಸೋಪ್‌, ಶವರ್‌ ಜೆಲ್‌, ಟಾಲ್ಕಂ ಪೌಡರ್‌, ಹ್ಯಾಂಡ್‌ವಾಶ್‌, ಅಗರಬತ್ತಿ, ಸಾಂಬ್ರಾಣಿ, ಧೂಪ, ಮಿಲೆನಿಯಂ ಸೋಪ್‌, ಮುಂತಾದವುಗಳಿಗೆ ಅಪಾರ ಬೇಡಿಕೆ ಇದೆ. ವಿಜಯಪುರ ಜಿಲ್ಲೆಯಲ್ಲಿ ಮತ್ತು ಡಾಬಸ್‌‍ಪೇಟೆಯ ಕೈಗಾರಿಕಾ ಪ್ರದೇಶಗಳಲ್ಲಿ ಸಂಸ್ಥೆಯ ಉತ್ಪಾದನಾ ಘಟಕಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಮೈಸೂರು ಜಾಸ್ಮಿನ್ ಸೋಪ್ ಗೆ ಕೂಡ ಕಾಯಕಲ್ಪ ನೀಡಿ, ಬಹುದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆ ಮಾಡಲು ಚಿಂತನೆ ನಡೆಸಲಾಗಿದೆ. ಇಂದು ಹಲವಷ್ಟು ಉತ್ಪನ್ನಗಳನ್ನು ಬಿಡುಗಡೆ ಮಾಡುವುದರ ಜೊತೆಗೆ ನೂತನ ಯೋಜನೆಗಳನ್ನು ಸಹ ಹಂಚಿಕೊಳ್ಳಲಾಯಿತು ಎಂದರು.

2024–25ರಲ್ಲಿ, ಕೆಎಸ್‌ಡಿಎಲ್ ₹1,787 ಕೋಟಿ ವಹಿವಾಟು ದಾಖಲಿಸಿ ₹451 ಕೋಟಿ ನಿವ್ವಳ ಲಾಭ ಗಳಿಸಿ, 43,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ವಿಶ್ವಾಸಾರ್ಹ ಉತ್ಪನ್ನಗಳನ್ನು ತಲುಪಿಸಿದೆ ಎಂದು ತಿಳಿಸಿದರು.

ಜನವರಿ 2026 ರಲ್ಲಿ ದಾಖಲೆಯ 4,894 ಮೆಟ್ರಿಕ್ ಟನ್‌ಗಳ ಉತ್ಪಾದನೆ ಮತ್ತು 2030 ರ ವೇಳೆಗೆ ₹5,000 ಕೋಟಿ ವಹಿವಾಟು ಸಾಧಿಸುವ ಸ್ಪಷ್ಟ ಮಾರ್ಗಸೂಚಿಯೊಂದಿಗೆ, ಮೈಸೂರು ಸ್ಯಾಂಡಲ್ ಸೋಪ್ ಪಿಎಸ್‌ಯುಗಳನ್ನು ಆಧುನೀಕರಿಸುವ, ರಾಜ್ಯಕ್ಕೆ ಮೌಲ್ಯವನ್ನು ಉತ್ಪಾದಿಸುವ ಮತ್ತು ಬ್ರಾಂಡ್ ಕರ್ನಾಟಕವನ್ನು ಜಗತ್ತಿಗೆ ಕೊಂಡೊಯ್ಯುವ ಕರ್ನಾಟಕದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಕರ್ನಾಟಕದ ಪರಂಪರೆಯ ಬ್ರ್ಯಾಂಡ್ ಆಗಿರುವ ಮೈಸೂರು ಸ್ಯಾಂಡಲ್ ಸೋಪ್, ಹೊಸ ನೋಟ ಮತ್ತು ನವೀಕೃತ ಜಾಗತಿಕ ಮಹತ್ವಾಕಾಂಕ್ಷೆಯೊಂದಿಗೆ ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ಒಂದು ಶತಮಾನಕ್ಕೂ ಹೆಚ್ಚು ಕಾಲ, ಮೈಸೂರು ಸ್ಯಾಂಡಲ್ ಸೋಪ್ ಶುದ್ಧತೆ, ಗುಣಮಟ್ಟ ಮತ್ತು ನಂಬಿಕೆಗಾಗಿ ನಿಂತಿದೆ ಎಂದರು‌.

ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಜರುಗಿದ ಸಮಾರಂಭದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಬೆಳೆದು ಬಂದ ಹಾದಿಯನ್ನು ಬಿಂಬಿಸುವ ಸುಗಂಧ ಸಿರಿ ಹೊತ್ತಗೆಯನ್ನು ಬಿಡುಗಡೆ ಮಾಡಲಾಯಿತು.

ಈ ವೇಳೆ ಮುದ್ದೇಬಿಹಾಳದ ಶಾಸಕರು ಹಾಗೂ KSDL ಅಧ್ಯಕ್ಷರಾದ ಸಿ.ಎಸ್‌‍ ಅಪ್ಪಾಜಿ ನಾಡಗೌಡ, ಕೈಗಾರಿಕಾ ಇಲಾಖೆ, KSDL, MSIL ಅಧಿಕಾರಿಗಳು ಸೇರಿದಂತೆ ಹಲವಾರು ಗಣ್ಯರು ಇಂದಿನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

3 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

3 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

15 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

18 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

19 hours ago