ನಟ ಅರ್ಜುನ್ ಸರ್ಜಾ ಮಗಳು ಐಶ್ವರ್ಯ ಅರ್ಜುನ್ ಮತ್ತು ತಂಬಿ ರಾಮಯ್ಯ ಅವರ ಮಗ ಉಮಾಪತಿ ಅಧಿಕೃತವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಚೆನ್ನೈನಲ್ಲಿ ಅರ್ಜುನ್ ಸರ್ಜಾ ಅವರ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರು ಉಂಗುರ ಬದಲಾವಣೆ ಮಾಡಿಕೊಂಡಿದ್ದಾರೆ. ಕುಟುಂಬ ಸದಸ್ಯರು, ನಟ ಧ್ರುವ ಸರ್ಜಾ ಹಾಗೂ ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿ ಶುಭ ಹಾರೈಸಿದರು.