
‘ಪುಷ್ಪ-2- ದಿ ರೂಲ್’ ಚಿತ್ರದ ಪ್ರದರ್ಶನದ ವೇಳೆ ಡಿಸೆಂಬರ್ 4ರಂದು ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂತ್ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ಬಳಿ ತಮ್ಮ ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಘಟನೆ ಸಂಭವಿಸುತ್ತದೆ. ಈ ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದರು.
ಈ ಪ್ರಕರಣಕ್ಕರ ಸಂಬಂಧಿಸಿದಂತೆ ಅಲ್ಲು ಅರ್ಜುನ್‌ನನ್ನು ಇಂದು ಬಂಧಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಅಲ್ಲು ಅರ್ಜುನ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಸದ್ಯ ಚಂಚಲಗುಡ ಜೈಲು ಪಾಲಾಗಲಿದ್ದಾರೆ.