ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಇನ್ನು ನಟ ದರ್ಶನ್ ಗೆ ನೀಡಲಾಗಿರುವ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ಜಾಮೀನು ಪಡೆದ ಬಳಿಕ ಒಂದು ವಾರದಲ್ಲಿ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು ಎಂದು ಹೇಳಿದೆ. ಅಲ್ಲದೆ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟ್ ಸುಪರ್ಧಿಗೆ ನೀಡಬೇಕು ಎಂದು ಹೇಳಿದೆ.
ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…