ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನು ರದ್ದು ವಿಚಾರ: ರೇಣುಕಾಸ್ವಾಮಿ ಕುಟುಂಬದ ಪ್ರತಿಕ್ರಿಯೆ ಏನು…….?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನನ್ನು ರದ್ದುಪಡಿಸಿ‌ ಆದೇಶ ಮಾಡಿದೆ.

ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಖಡಕ್ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪು ಮೃತ ರೇಣುಕಾಸ್ವಾಮಿ ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ ಎಂದು ರೇಣುಕಾಸ್ವಾಮಿ ತಾಯಿ ರತ್ನ ಪ್ರಭಾ ಹೇಳಿದ್ದಾರೆ.

ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆ ಬಾಗಲೇಬೇಕು. ಸುಪ್ರೀಂಕೋರ್ಟ್ ಆದೇಶದಿಂದ ನ್ಯಾಯಾಂಗ ಮೇಲಿನ ವಿಶ್ವಾಸ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ನಮ್ಮ ಮನೆಯವರು ಪೂಜೆಗೆ ಕುಳಿತಾಗ ಸುಪ್ರೀಂಕೋರ್ಟ್ ಆದೇಶ ಬಂದಿದೆ. ಈ ತೀರ್ಪಿನಿಂದ ಸಂತೋಷವಾಗಿದೆ. ನನ್ನ ಪತಿ ಪೂಜೆಗೆ ಹೊರಟಾಗಲೇ ನ್ಯಾಯ ಸಿಗುವ ವಿಶ್ವಾಸ ಇತ್ತು ಎಂದು ಹೇಳಿದರು.

ರೇಣುಕಾಸ್ವಾಮಿ ಪತ್ನಿ ಸಹನಾ ಮಾತನಾಡಿ, ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಕಾನೂನು ಅನ್ವಯ ತಕ್ಕ ಶಿಕ್ಷೆ ಆಗಲಿ ಎಂದರು.

ರೇಣುಕಾಸ್ವಾಮಿ ತಂದೆ ಕಾಶಿನಾಥ್‌ ಮಾತನಾಡಿ, ಜಾಮೀನು ರದ್ದತಿಯಿಂದ ನ್ಯಾಯಾಂಗದ ಮೇಲೆ ನಂಬಿಕೆ ಬಂದಿದೆ ಎಂದು ತಿಳಿಸಿದ್ದಾರೆ. ಸರ್ಕಾರ ಕಾನೂನಿನ ಬಗ್ಗೆ ನಂಬಿಕೆ, ವಿಶ್ವಾಸ ಮೂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ. ಸೊಸೆಯ ಕೆಲಸದ ಬಗ್ಗೆ ನೋವಿದೆ. ಕೆಲಸ ಕೊಡುವ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ದರ್ಶನ್ ಗೆ ಮತ್ತೆ ಖಡಕ್ ಪೊಲೀಸ್ ಅಧಿಕಾರಿ ಬಿ.ದಯಾನಂದ್ ಕಂಟಕ

ರೇಣುಕಾ ಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಜೈಲಿನಲ್ಲಿದ್ದಾಗ ಅಂದು ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್ ಅವರು ಮುತುವರ್ಜಿ ವಹಿಸಿ ತನಿಖೆ ಮಾಡಿಸಿದ್ದರು. ಡೇ ಟು ಡೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರತಿಯೊಂದನ್ನು ಪರಿಶೀಲನೆ‌ ಮಾಡಿ ತನಿಖೆ ಮಾಡುತ್ತಿದ್ದರು.

ಪ್ರತಿದಿನ ಎರಡ್ಮೂರು ಗಂಟೆ ಠಾಣೆಯಲ್ಲಿದ್ದು, ತನಿಖೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದರು. ಖುದ್ದು ಆರೋಪಿಗಳ ವಿಚಾರಣೆ ನಡೆಸಿದ್ದರು. ಹೈ ಪ್ರೊಫೈಲ್ ಕೇಸಲ್ಲಿ ಸಣ್ಣ ಲೋಪ ಆಗದಂತೆ ನಿಗಾ ವಹಿಸಿ ತನಿಖೆ ಮಾಡುತ್ತಿದ್ದರು.

ಪೊಲೀಸರ ಕರಾರುವಾಕ್ ತನಿಖೆಯಿಂದ ಸುಮಾರು 131 ದಿನ ದರ್ಶನ್ ಆಂಡ್ ಗ್ಯಾಂಗ್ ಜೈಲಿನಲ್ಲಿದ್ದರು. ಅಲ್ಲದೆ ದರ್ಶನ್ ಜೈಲು ರಾಜಾತಿಥ್ಯದ ಬಗ್ಗೆ ಮೂರು ಪ್ರತ್ಯೇಕ ಕೇಸ್ ದಾಖಲಿಸಿ ತನಿಖೆಗೆ ಆದೇಶಿಸಿದರು.

ಇದೀಗ ಕಾರಾಗೃಹ ಇಲಾಖೆ ಎಡಿಜಿಪಿಯಾಗಿರುವ ಬಿ.ದಯಾನಂದ್ ಅಡಿಗೆ ದರ್ಶನ್ ಗ್ಯಾಂಗ್ ಸಿಲುಕಿದ್ದಾರೆ. ಮತ್ತೆ ದರ್ಶನ್ ಆಂಡ್ ಗ್ಯಾಂಗ್ ಜೈಲು ಪಾಲು ಹಿನ್ನೆಲೆ. ದರ್ಶನ್ ಆಂಡ್ ಗ್ಯಾಂಗ್ ಗೆ ಜೈಲು ನಿಯಮಗಳಂತೆ ಸಾಮಾನ್ಯ ಖೈದಿಯಂತೆ ಟ್ರೀಟ್ ಮಾಡಲಾಗುತ್ತದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 hour ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

2 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

4 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

8 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

8 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

9 hours ago