ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರದ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಆಗಮಿಸಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ ಇಬ್ಬರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿದುಬಂದಿದೆ….
ನಿನ್ನೆಯಷ್ಟೇ ಡ್ರ್ಯಾಗನ್ ನಿಂದ ಚುಚ್ಚಲು ಬಂದಿದ್ದರು ಎಂದು ನಟ ಪ್ರಥಮ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರು ಹಿನ್ನೆಲೆ ಬೇಲ್ ಪಡೆಯಲು ಯಶಸ್ವಿನಿ ಹಾಗೂ ಬೇಕರಿ ರಘು ಕೋರ್ಟ್ ಗೆ ಹಾಜರಾಗಿದ್ದರು. ತಮ್ಮ ವಕೀಲರ ಮೂಲಕ ಕೋರ್ಟ್ ಮೆಟ್ಟಿಲೇರಿ ಜಾಮೀನು ಪಡೆದಿದ್ದಾರೆ.