ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಮಸಿ ಬಳಿಯುವ ಯತ್ನ ನಡೆಸಿದ್ದಾರೆ.
ಪ್ರಥಮ್ ಮಾತಿನ ಭರದಲ್ಲಿ ಅಂಬೇಡ್ಕರ್ ಅವರ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದರು ಎಂದು ಆರೋಪಿಸಿ ಮಸಿ ಬಳಿಯಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆದಿದ್ದಾರೆ.
ನಟ ಪ್ರಥಮ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮುಗಿಸಿ ವಾಪಸ್ ಹೊರಡುವ ವೇಳೆ ಘಟನೆ ನಡೆದಿದೆ
ಪ್ರಥಮ್ ವಿರುದ್ಧ ದಲಿತ ಸಂಘಟನೆ ಮುಖಂಡರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಮುಂದೆ ಹೈಡ್ರಾಮ ನಡೆದಿದೆ.
ಮಸಿ ಬಳಿಯಲು ಮುಂದಾದವರನ್ನು ಪೊಲೀಸರು ತಡೆದಿದ್ದಾರೆ.