ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ ಪ್ರಥಮ್ ಬಂದಿದ್ದರು. ಈ ವೇಳೆ ಪ್ರಥಮ್ ಮೇಲೆ ದುಷ್ಕರ್ಮಿಗಳು ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಈ ವಿಚಾರವಾಗಿ ಘಟನೆ ನಡೆದು ಹಲವು ದಿನಗಳ ನಂತರ ಖುದ್ದು, ಪ್ರಥಮ್ ನೇರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಪ್ರಥಮ್ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹಲ್ಲೆ, ಬೆದರಿಕೆ ಹಾಕಲಾಗಿದ್ದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ ಪ್ರಥಮ್ ಬಂದಿದ್ದರು. ಈ ವೇಳೆ ಪ್ರಥಮ್ ಮೇಲೆ ದುಷ್ಕರ್ಮಿಗಳು ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಆರೋಪ ಮಾಡಿದ್ದರು.
ಈ ಘಟನೆ ಸಂಬಂಧ ಲಾಯರ್ ಜಗದೀಶ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
ಜೊತೆಗೆ ಈ ಕುರಿತು ಪ್ರಥಮ್ ಜೊತೆ ಲಾಯರ್ ಜಗದೀಶ್ ಫೋನ್ ಕಾಲ್ ಮೂಲಕ ಮಾತಾಡಿರುವ ಆಡಿಯೋ ಕೂಡ ವೈರಲ್ ಆಗಿತ್ತು. ಇದಾದ ಬಳಿಕೆ ಈ ಘಟನೆ ಇಷ್ಟೋಂದು ಚರ್ಚೆಗಳಿಗೆ ಗ್ರಾಸವಾಗಿದೆ.
ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?
ಜು.22ರಂದು ಮಹೇಶ್ ಎಂಬ ಸಿನಿಮಾ ಪ್ರೊಮೋಟರ್ ರವರು ನನಗೆ ದೊಡ್ಡ ಬಳ್ಳಾಪುರದ ಯಲ್ಲಮ್ಮ ದೇವಸ್ಥಾನದ ಪೂಜೆಗೆ ಕರೆದಿದ್ದು ಪೂಜೆ ಮುಗಿಸಿ ಮಧ್ಯಾಹ್ನ ಸುಮಾರು 03:50 ಗಂಟೆಗೆ ನಾನು ವಾಪಸ್ಸು ಬರುವ ವೇಳೆ ಯಶಸ್ಸಿನಿ ಮತ್ತು ಬೇಕರಿ ರಘು ಹಾಗೂ ಒಂದಷ್ಟು ಅಪರಿಚಿತರು ಕಾರನ್ನು ಸುತ್ತುವರೆದು ಅಜ್ಞಾತ ಸ್ಥಳಕ್ಕೆ ಕರೆದೊಯು (ಗ್ರಾಮದ ಹೆಸರು ತಿಳಿದಿರುವುದಿಲ್ಲ. ಸ್ಥಳವನ್ನು ಗುರ್ತಿಸುತ್ತೇನೆ) ದರ್ಶನ್ ರವರನ್ನು ಕುರಿತು ನನ್ನ ಬಾಸ್ ಬಗ್ಗೆ, ಮಾತನಾಡಿದ್ದೀಯ ಅಂತ ಅವಾಚ್ಯ ಶಬ್ದಗಳಿಂದ ಬೈಯ್ದು, ಅವರುಗಳ ಬಳಿ ಇದ್ದ ಡ್ರಾಗರ್ ಮತ್ತು ಚಾಕು ತೋರಿಸಿ ಚುಚ್ಚಲು ಮುಂದಾಗಿ ಭಯಪಡಿಸಿರುತ್ತಾರೆ. ಇವರು ನನ್ನ ಬಳಿ ಗಲಾಟೆ ಮಾಡುವಾಗೆ, ಜೈಲಿನಲಿ.. ದರ್ಶನ್ ಜೊತೆ ಇದ್ದ ಬ್ಯಾರಕ್ ಪೋಟೋವನ್ನು ತೋರಿಸಿರುತ್ತಾರೆ. ಆ ನಂತರ ಅಲ್ಲಿಂದ ಬಹಳ ಉಪಾಯದಿಂದ ಪ್ರಾಣವನ್ನು ಉಳಿಸಿಕೊಂಡು ಬಂದಿದ್ದೆ ದೊಡ್ಡ ವಿಚಾರವಾಗಿರುತ್ತದೆ. ಈ ವಿಚಾರವನ್ನು ನನ್ನ ಜೊತೆ ಇದ್ದ ನನ್ನ ಸ್ನೇಹಿತರಾದ ಮಹೇಶ್, ಪ್ರಮೋದ್ ಮತ್ತು ಚಾಲಕ ಪ್ರಕಾಶ್ ಇವರು ಖುದ್ದು ಮೇಲ್ಕಂಡ ವಿಚಾರಕ್ಕೆ ಸಾಕ್ಷಿಯಾಗಿರುತ್ತಾರೆ, ಆದ್ದರಿಂದ ಮೇಲ್ಕಂಡವರಿಂದ ನನಗೆ ಜೀವ ಭಯವಿರುವುದರಿಂದ ನನಗೆ ರಕ್ಷಣೆ ನೀಡಿ ಕಾನೂನು ಅಡಿಯಲ್ಲಿ ಅವರ ಮೇಲೆ ಕ್ರಮ ಜರುಗಿಸಬೇಕೆಂದು ಈ ಮೂಲಕ ಕೋರುತ್ತೇನೆ ಎಂದು ದೂರಿನಲ್ಲಿ ನಮೂದಿಸಿದ್ದಾರೆ.
ಜು.28 ರಿಂದ ಇಲ್ಲಿಯವರೆಗೂ ದರ್ಶನ್ ರವರ ಅಧಿಕೃತ ಫ್ಯಾನ್ ಪೇಜಾದ ಡಿ ಡೈನಾಸ್ಟಿ, ಡಿ ಕಿಂಗ್ ಡಮ್, ಡಿ ಯೂನಿವರ್ಸ್ ಮತ್ತು ಡೆವಿಲ್ ಕಿಂಗ್ ಡಮ್ ಜೊತೆಗೆ 500 ಕ್ಕೂ ಹೆಚ್ಚು ಪೇಜ್ ಗಳಿಂದ ನನ್ನ ವೈಯಕ್ತಿಕ ತೇಜೋವಧೆಗೆ ಇಳಿದಿರುತ್ತಾರೆ, ಆದ್ದರಿಂದ ಇವರುಗಳ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ದೂರು ನೀಡಿದ್ದಾರೆ..
ಪ್ರಥಮ್ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರಿಂದ ಇಂದಿನಿಂದ ತನಿಖೆ ನಡೆಸಲಿದ್ದಾರೆ.