ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಕರೂರಿನಲ್ಲಿ ರ‍್ಯಾಲಿ: ರ‍್ಯಾಲಿ ಕಾಲ್ತುಳಿತದಲ್ಲಿ 8 ಮಕ್ಕಳು, 16 ಮಹಿಳೆಯರು ಸೇರಿದಂತೆ 36 ಮಂದಿ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ 8 ಮಕ್ಕಳು, 16 ಮಹಿಳೆಯರು ಸೇರಿದಂತೆ 36 ಮಂದಿ ಸಾವನ್ನಪ್ಪಿದ್ದಾರೆ.

40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರ‍್ಯಾಲಿಯ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ ಸಿಲುಕಿದವರಿಗೆ ಸಹಾಯ ಮಾಡಲು ಮತ್ತು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತ್ವರಿತಗೊಳಿಸಲು ಕರೂರ್‌ಗೆ ಧಾವಿಸುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆರೋಗ್ಯ ಸಚಿವ ಮಾ. ಸುಬ್ರಮಣಿಯನ್, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಡೇವಿಡ್ಸನ್ ದೇವಾಶಿರ್ವತಮ್ ಮತ್ತು ತಿರುಚಿ ಮತ್ತು ದಿಂಡಿಗಲ್‌ನ ಜಿಲ್ಲಾಧಿಕಾರಿಗಳನ್ನು ನಿಯೋಜಿಸಿದ್ದರು.

ಈ ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ಸಮಾವೇಶದ ವೇಳೆ ನಡೆದ ಅಹಿತಕರ ಘಟನೆ ತೀವ್ರ ದುಃಖ ತಂದಿದೆ ಎಂದಿದ್ದಾರೆ.

ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಇವೆ. ಈ ಸಂಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿ ತುಂಬಲಿ ಎಂದು ಹಾರೈಸುತ್ತೇನೆ. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿರುವ ದುರಂತದಲ್ಲಿ ಅನೇಕರು ಧಾರುಣ ಸಾವನ್ನಪ್ಪಿ, ಇನ್ನೂ ಅನೇಕರು ತೀವ್ರವಾಗಿ ಗಾಯಗೊಂಡಿರುವ ವಿಷಯ ತಿಳಿದು ತೀವ್ರ ಆಘಾತ ಉಂಟಾಯಿತು.

ಇದು ಅತ್ಯಂತ ದುಃಖಕರ ಘಟನೆ. ಮೃತರ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಈ ಪ್ರಾಣ ನಷ್ಟವನ್ನು ಭರಿಸುವ ಶಕ್ತಿ ಅವರಿಗೆ ಸಿಗಲಿ ಹಾಗೂ ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

44 minutes ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

12 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

19 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

22 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

24 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago