ವಾಷಿಂಗ್ಟನ್ ನಗರದ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿ ಅವರಿಗೆ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ ಪ್ರದಾನ ಮಾಡಲಾಯಿತು.
ಖ್ಯಾತ ನಟ – ನಿರ್ದೇಶಕ ರಿಷಬ್ ಶೆಟ್ಟಿ ಇತ್ತೀಚೆಗೆ ಪತ್ನಿ ಪ್ರಗತಿ ಶೆಟ್ಟಿ ಸಮೇತ ಅಮೇರಿಕಾದ ವಾಷಿಂಗ್ಟನ್ ನ ಸಿಯಾಟಲ್ ಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿ ಅವರಿಗೆ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಈ ಪ್ರಶಸ್ತಿಯನ್ನು ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೆನೆಟರ್ ಡಾ.ದೆರೀಕ್ ಟ್ರಸ್ಫರ್ಡ್ ಸಹ ಉಪಸ್ಥಿತರಿದ್ದರು.
ವಾಷಿಂಗ್ಟನ್ ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ 95 ವರ್ಷಗಳ ಇತಿಹಾಸವಿದೆ. ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದರೆ. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ. ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…