ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅವರು ತಮ್ಮ ಪತಿ ವಿಜಯ್ ರಾಘವೇಂದ್ರ ಜೊತೆಗೆ ಬ್ಯಾಂಕಾಕ್ಗೆ ತೆರಳಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅವರು ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿದ್ದು ವಿಜಯರಾಘವೇಂದ್ರ ಅವರನ್ನು 2007, ಆಗಸ್ಟ್ 26 ರಂದು ಮದುವೆಯಾಗಿದ್ದರು. ವಿಜಯರಾಘವೇಂದ್ರ- ಸ್ಪಂದನ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರ ಇದ್ದಾನೆ.