Categories: Trending

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು ಸುದ್ದಿಯಾಗುತ್ತಲೇ ಇದೆ. ಇದರ ಬೆನ್ನಲ್ಲೇ ಇವರಿಬ್ಬರು ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಲು ಪ್ರಾರಂಭಿಸಿದೆ.‌ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.. ಈ ಮೂಲಕ ರಶ್ಮಿಕಾ ಹಾಗೂ ವಿಜಯ್ ಇದೇ ಫೆಬ್ರುವರಿ ಕೊನೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವುದು ಫಿಕ್ಸ್ ಎನ್ನಲಾಗುತ್ತಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ, ‘ಕುಟುಂಬಸ್ಥರ ಆಶೀರ್ವಾದದೊಂದಿಗೆ ನಾನು ಮತ್ತು ರಶ್ಮಿಕಾ ಫೆಬ್ರುವರಿ 26ರಂದು ಸಾಂಪ್ರದಾಯಿಕವಾಗಿ, ಆಪ್ತರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದೇವೆ. ನಿಮ್ಮ ಉಪಸ್ಥಿತಿ ಮತ್ತು ಆಶೀರ್ವಾದ ಈ ಸಂದರ್ಭವನ್ನು ನಮಗೆ ಇನ್ನಷ್ಟು ವಿಶೇಷವಾಗಿಸುತ್ತದೆ. ನಮ್ಮೊಂದಿಗೆ ಸೇರಲು ನಿಮ್ಮನ್ನು ಹೃತ್ತೂರ್ವಕವಾಗಿ ಆಹ್ವಾನಿಸುತ್ತೇವೆ’ ಎಂದು ಬರೆದಿರುವುದಾಗಿ ವರದಿಯಾಗಿದೆ.

ಫೆಬ್ರವರಿ 26 ರಂದು ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ವಿವಾಹ ಮಹೋತ್ಸವ ಎಲ್ಲಿ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ, ಆರತಕ್ಷತೆ ಮಾರ್ಚ್ 4 ರಂದು ನಡೆಯಲಿದೆ ಎಂಬ ಅಂಶ ಆಮಂತ್ರಣ ಪತ್ರಿಕೆಯಲ್ಲಿದೆ.

ಮಾರ್ಚ್ 4 ರಂದು ಬುಧವಾರ ಸಂಜೆ 7 ಗಂಟೆಯಿಂದ ಹೈದರಾಬಾದ್‌ನಲ್ಲಿರುವ ಬಂಜಾರಾ ಹಿಲ್ಸ್‌ನ ತಾಜ್‌ ಕೃಷ್ಣದಲ್ಲಿ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ರಿಸೆಪ್ಷನ್ ಜರುಗಲಿದೆ ಎಂದು ಪತ್ರಿಕೆಯಲ್ಲಿ ಬರೆಯಲಾಗಿದೆ.

ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ, ಅದು ಆಮಂತ್ರಣ ಪತ್ರಿಕೆಯಂತಿಲ್ಲ. ಪತ್ರದಂತಿದೆ. ಹೀಗಾಗಿ, ಇದು ಫೇಕೋ ಅಥವಾ ನಿಜವೋ ಎಂಬ ಅನುಮಾನ ಅಭಿಮಾನಿಗಳಿಗೆ ಕಾಡುತ್ತಿದೆ.

ಪ್ರೀತಿ ಬಗ್ಗೆ, ಮದುವೆ ಬಗ್ಗೆ ಗಾಸಿಪ್‌ಗಳು ಕೇಳಿಬರುತ್ತಲೇ ಇದ್ದರೂ ಈವರೆಗೂ ವಿಜಯ್ ದೇವರಕೊಂಡ ಆಗಲಿ, ರಶ್ಮಿಕಾ ಮಂದಣ್ಣ ಆಗಲಿ ತುಟಿ ಎರಡು ಮಾಡಿಲ್ಲ. ಇದೀಗ ಆಮಂತ್ರಣ ಪತ್ರಿಕೆ ವೈರಲ್‌ ಆದರೂ, ಇಬ್ಬರ ಕಡೆಯಿಂದ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

2 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

4 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

7 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

8 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

15 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

15 hours ago