ನಡು ರಸ್ತೆಯಲ್ಲೇ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಪುಂಡರ ಹಾವಳಿಗೆ ಬೆಚ್ಚಿಬಿದ್ದ ಸಾರ್ವಜನಿಕರು

ಹಳೇ ದ್ವೇಷದ ಹಿನ್ನೆಲೆ ನಡು ರಸ್ತೆಯಲ್ಲೇ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ನಿನ್ನೆ ಸಂಜೆ ನಗರದ ರೈಲ್ವೆ ನಿಲ್ದಾಣ ಬಳಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅರೆಹಳ್ಳಿ ಗುಡ್ಡಹಳ್ಳಿ ನಿವಾಸಿಯಾದ ಪೃಥ್ವಿರಾಜ್‌ (26), ಮಾರಕಾಸ್ತ್ರಗಳಿಂದ ಹಲ್ಲೆಗೆ ಒಳಗಾದ ಯುವಕ.

ಕಳೆದ ಭಾನುವಾರ ಎರಡು ಗುಂಪುಗಳ ನಡುವೆ ಗಲಾಟೆಯಾಗಿತ್ತು. ನಿನ್ನೆ ಸಂಜೆ ಒಬ್ಬೊಂಟಿಯಾಗಿ ಸಿಕ್ಕ ಪೃಥ್ವಿರಾಜ್‌ ಮೇಲೆ ಪಕ್ಕದಲ್ಲೇ ಇದ್ದ ಕೋಳಿ ಅಂಗಡಿಯಲ್ಲಿ ಇದ್ದ ಚಿಕನ್ ಕಟ್ ಮಾಡುವ ಮಾರಕಾಸ್ತ್ರದಿಂದ ಏಕಾಏಕಿ ದಾಳಿ ಮಾಡಲಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿರುವ ಯುವಕ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಇತ್ತೀಚಿಗೆ ಕ್ಷುಲ್ಲಕ ಕಾರಣಕ್ಕೆ ಡಾಬಾ ಬಳಿ ನಡೆದ ಯುವಕನ ಕೊಲೆ ಪ್ರಕರಣ ಮಾಸುವ ಮೊದಲೇ ನಿನ್ನೆ ಸಂಜೆ ನಡೆದ ಹಲ್ಲೆ ಘಟನೆಯಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ.

ಸ್ಥಳಕ್ಕೆ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *