“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಿಂದ ಹೊರಬರುತ್ತಿದ್ದ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದರು. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅವರು ಬಂದ್‌ಗೆ ಕರೆ ನೀಡಿದ್ದರು.

ಪೊಲೀಸರು ವಶಕ್ಕೆ ಪಡೆಯುತ್ತಿದ್ದ ವೇಳೆ ವಾಟಾಳ್ ನಾಗರಾಜ್ ಅವರು “ನನಗೆ ನೀರು ಬೇಕು, ನಾನು ಮಾತಾಡುವುದಿಲ್ಲ” ಎಂದು ಹೇಳಿ ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಬೇಕು ಎಂದು ಆಗ್ರಹಿಸಿ ಹೋರಾಟ ಮುಂದುವರಿಸುವುದಾಗಿ ವಾಟಾಳ್ ನಾಗರಾಜ್ ಹೇಳಿದ್ದಾರೆ.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

42 minutes ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

13 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

18 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

19 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago