ನನ್ನ ಅವಧಿಯಲ್ಲಿ ದೊಡ್ಡಬಳ್ಳಾಪುರ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿದ್ದೆ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: 2024ರಲ್ಲಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ ಮತದಾರರನ್ನು ಗುರುತಿಸಿ ಮತ್ತೆ ಪಟ್ಟಿಗೆ ಸೇರ್ಪಡೆಗೊಳಿಸುವ ಉದ್ದೇಶದಿಂದ ಪಕ್ಷದ ವತಿಯಿಂದ 40 ದಿನಗಳ ಕಾಲ ‘ವೋಟ್ ಬಚಾವ್, ದೇಶ್ ಬಚಾವ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿ ಮತದಾರರನ್ನು ಮತ್ತೆ ಪಟ್ಟಿಗೆ ಸೇರಿಸುವ ಜವಾಬ್ದಾರಿಯನ್ನು ಪಕ್ಷ ವಹಿಸಿದ್ದು, ಅದನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಶಾಸಕತ್ವದ ಅವಧಿಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿತ್ತು. ವಸತಿ ಯೋಜನೆಯಡಿ ಒಟ್ಟು 32 ಸಾವಿರ ಮನೆಗಳು ಮಂಜೂರಾಗಿದ್ದು, 2019ರಿಂದ 2023ರವರೆಗಿನ ಅವಧಿಯಲ್ಲಿ ಸುಮಾರು 18 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

ಬಗರ್ ಹುಕುಂ ಯೋಜನೆಯಡಿಯಲ್ಲಿ ಸಾಗುವಳಿ ರೈತರಿಗೆ ಭೂಮಿ ಮಂಜೂರು ಮಾಡುವ ವಿಚಾರವಾಗಿ ತಮ್ಮ ಅವಧಿಯಲ್ಲಿ 20 ಸಭೆಗಳನ್ನು ನಡೆಸಿ ಸುಮಾರು 1,500 ರೈತರಿಗೆ ಜಮೀನು ಮಂಜೂರು ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಕಾಲಕಾಲಕ್ಕೆ ಸಭೆಗಳನ್ನು ನಡೆಸಲಾಗಿತ್ತು. ಆದರೆ, 2023ರಿಂದ ಈವರೆಗೆ ಕೇವಲ ಬೆರಳೆಣಿಕೆ ಸಭೆಗಳು ಮಾತ್ರ ನಡೆದಿವೆ ಎಂದು ಆರೋಪಿಸಿದರು.

ತಮ್ಮ ಅವಧಿಯಲ್ಲಿ 13 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಿಸಲಾಗಿತ್ತು. ಆದರೆ, ಇದೀಗ ಆಸ್ಪತ್ರೆಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಸಂಬಂಧಪಟ್ಟವರು ವಿಫಲರಾಗಿದ್ದಾರೆ. ವಾಲ್ಮೀಕಿ ಭವನದ ಕಾಮಗಾರಿ ಪೂರ್ಣಗೊಳಿಸಲು ಬಾಕಿ ಇದ್ದ ಅನುದಾನವನ್ನೂ ಬಿಡುಗಡೆ ಮಾಡಿಸಲಾಗಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ನಿರಂತರವಾಗಿ ಶ್ರಮಿಸಲಾಗಿತ್ತು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಬಗ್ಗೆ ವಿರೋಧ ಪಕ್ಷದವರು ಮಾತನಾಡುತ್ತಿಲ್ಲ. ಆದರೆ, ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಹಾಲಿನ ದರ ಹೆಚ್ಚಳ ಮಾಡಿದಾಗ ಮಾತ್ರ ವಿರೋಧ ವ್ಯಕ್ತಪಡಿಸುತ್ತಾರೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ತಪ್ಪೇ? ಗ್ಯಾಸ್, ತೈಲ ಬೆಲೆ ಏರಿಕೆಯಾದಾಗ ಶೋಭಾ ಕರಂದ್ಲಾಜೆ ಎಲ್ಲಿದ್ದರು ಎಂದು ಪ್ರಶ್ನಿಸಿದರು.

ರೇಷನ್ ಕಾರ್ಡ್‌ಗಳು ರದ್ದಾಗಿದ್ದರೆ ಅದಕ್ಕೆ ಕೇಂದ್ರ ಸರ್ಕಾರ ರೂಪಿಸಿರುವ ಮಾನದಂಡಗಳೇ ಕಾರಣ. ದೇಶದಲ್ಲಿ ಬಿಜೆಪಿ ಸರ್ಕಾರದ ಆಡಳಿತದಿಂದ ಅರಾಜಕತೆ ಸೃಷ್ಟಿಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗುತ್ತಿದ್ದು, ನಾಡು ಸುಭಿಕ್ಷವಾಗುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ಬಿಡಬೇಕು ಎಂದು ಆಗ್ರಹಿಸಿದರು.

ಇನ್ನು ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕುಮಾರಸ್ವಾಮಿ ಇನ್ನೂ ಅದನ್ನೇ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ಟೀಕಿಸಿದ ಅವರು, ಕೈಗಾರಿಕೆಗಳ ಸಿಎಸ್‌ಆರ್ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಪ್ರಯತ್ನದಿಂದ ಆಯಾ ರಾಜ್ಯಗಳ ಕೈಗಾರಿಕೆಗಳ ಸಿಎಸ್‌ಆರ್ ಅನುದಾನವನ್ನು ಆಯಾ ರಾಜ್ಯಗಳಲ್ಲಿಯೇ ವಿನಿಯೋಗಿಸುವಂತಾಗಿದೆ ಎಂದು ಹೇಳಿದರು.

ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಮುಖಂಡರಾದ ಅಪ್ಪಿ ವೆಂಕಟೇಶ್, ಟಿ.ಮುನಿರಾಜು, ಆಂಜನಮೂರ್ತಿ, ಜವಾಜಿ ರಾಜೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಟೀರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರೀ ಅನಾಹುತ: ರಸ್ತೆ ಗುಂಡಿಗಳೇ ಅವಘಡಕ್ಕೆ ಕಾರಣ ಎಂಬ ಶಂಕೆ

ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೀರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ…

11 hours ago

ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಕರು ಮತ್ತು ಸದಸ್ಯರ ನೇಮಕ: ಜಿಲ್ಲಾವಾರು ಪಟ್ಟಿ ಪ್ರಕಟ

ರಾಜ್ಯದ 80ಕ್ಕೂ ಹೆಚ್ಚು ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಒಟ್ಟು 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ…

21 hours ago

ಇನ್ನೇನು ನಾಲ್ಕು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ವಿಧಿಯ ಕ್ರೂರ ಆಟಕ್ಕೆ ಬಲಿ: ಕೈಯಲ್ಲಿ ಮದುವೆ ಆಮಂತ್ರಣ ಪತ್ರ ಹಿಡಿದೇ ಸಾವಿನ ಮನೆ ಸೇರಿದ ನವವಧು

ಮನೆಯಲ್ಲಿ ಮದುವೆಯ ಸಂಭ್ರಮ ಮನೆಮಾಡಿತ್ತು. ಇನ್ನೇನು ನಾಲ್ಕೇ ನಾಲ್ಕು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಕೆಯ ಕೈಗಳಿಗೆ ಮೆಹಂದಿ ರಂಗು ಏರಬೇಕಿತ್ತು.…

22 hours ago

ಕನ್ನಡ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆ ಕಾಪಾಡುವುದು ಪ್ರತಿಯೊಬ್ಬರ ಹೊಣೆ- ಕರ್ನಾಟಕದಲ್ಲಿ ನೆಲೆಸುವ ಅನ್ಯಭಾಷಿಕರು ಕನ್ನಡ ಭಾಷೆಗೆ ನಿಷ್ಠರಾಗಿರಬೇಕು- ಹಂಸಲೇಖ

ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ಎಲ್ಲ ಭಾಷೆಗಳ ಜನರು ನೆಲೆಸಿದ್ದಾರೆ. ಆದರೆ ಬೇರೆ ಭಾಷೆಯವರು ಯಾರೇ ಆಗಿರಲಿ, ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡ…

22 hours ago

ಬೆಲೆ ಏರಿಕೆ, ವಿದ್ಯುತ್ ಅಭಾವ, ಭೂಸ್ವಾಧೀನ ನೀತಿ ಖಂಡಿಸಿ ಜೆಡಿಎಸ್ ಪ್ರತಿಭಟನೆ: ಹಳ್ಳಿ ಗುಗ್ಗುಗಳ ಶಕ್ತಿ ಏನೆಂಬುದು ಸರ್ಕಾರಕ್ಕೆ ತೋರಿಸುತ್ತೇವೆ- ಹರೀಶ್ ಗೌಡ

ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ಸಮಸ್ಯೆಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ಅವ್ಯವಸ್ಥೆ…

23 hours ago

₹50 ಸಾವಿರ ಲಂಚ ಸ್ವೀಕರಿಸುವಾಗ ನಗರಸಭೆ ಆಯುಕ್ತ ಎಸಿಬಿ ಬಲೆಗೆ: ಬಾಕಿ ಬಿಲ್ ಪಾವತಿಗೆ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ; ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿ ಹಣ ಪತ್ತೆ

ನಿರ್ಮಲ್: ಗುತ್ತಿಗೆದಾರನಿಗೆ ಬಾಕಿ ಉಳಿದಿದ್ದ ಕಾಮಗಾರಿಗಳ ಹಣ ಬಿಡುಗಡೆ ಮಾಡಲು ₹50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಭೈಂಸಾ ನಗರಸಭೆಯ ಪ್ರಭಾರ…

1 day ago