
2025-28ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿನ್ನೆ(ನ.9) ಚುನಾವಣೆ ನಡೆಯಿತು.
ಇದೀಗ ಫಲಿತಾಂಶವೂ ಕೂಡ ಹೊರಬಿದ್ದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಜೆ.ಮುನಿರಾಜು ಅವರು ಸ್ಪರ್ಧಿಸಿ 103 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.

ಈ ವೇಳೆ ಮಾತನಾಡಿದ ಜೆ.ಮುನಿರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿ ಗೆದ್ದಿದ್ದೇನೆ. ನನಗೆ ಮತ ನೀಡಿ ಗೆಲುವಿಗೆ ಕಾರಣರಾದ ಎಲ್ಲಾ ಪತ್ರಕರ್ತರು ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಪತ್ರಕರ್ತರಿಗೂ ಕೃತಜ್ಞನಾಗಿರುತ್ತೇನೆ. ಅದೇರೀತಿ ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಸಹಕರಿಸಿದ ಸುಗ್ಗರಾಜು ಜಿ.ಕೆ. ಮುಖಂಡತ್ವದ “ಒಳಿತಿಗಾಗಿ ಒಂದಾಗೋಣ ” ತಂಡದ ಎಲ್ಲಾ ಪತ್ರಕರ್ತ ಮಿತ್ರರಿಗೆ ಕೃತಜ್ಞತಾಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.