ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ. ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ ಎಂದರು.
ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರೃಣಿ ಎಂದು ತಿಳಿಸಿದ್ದಾರೆ.
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ ಎಂದು ಸ್ಪಷ್ಟಪಡಿಸಿದರು.
ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…