ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದು ಸೂಚಿಸಿದ ಸಿಎಂ ಸಿದ್ದರಾಮಯ್ಯ.
ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ನಾಡಬಂಧುಗಳಿಗೆ ರಾಜ್ಯೋತ್ಸವದ ಶುಭ ಕೋರಿ ಮಾತನಾಡಿದ ಅವರು, ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಹೇಳಿದರು.
ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.
ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ. ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…